2026-06-25 03:53:50

Horrible accident between car | ಗೊಬ್ಬರ ತುಂಬಿದ್ದ ಲಾರಿ ಕಾರಿನ ನಡುವೆ ಭೀಕರ ಅಪಘಾತ ಸ್ಥಳದಲ್ಲೇ ನಾಲ್ವರು ದುರ್ಮರಣ | Speed News Kannada

Horrible accident between car | ಗೊಬ್ಬರ ತುಂಬಿದ್ದ ಲಾರಿ ಕಾರಿನ ನಡುವೆ ಭೀಕರ ಅಪಘಾತ ಸ್ಥಳದಲ್ಲೇ ನಾಲ್ವರು ದುರ್ಮರಣ | Speed News Kannada

ತುಮಕೂರು: ಗೊಬ್ಬರ ತುಂಬಿದ್ದ ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ಈ ದುರಂತ ಸಂಭವಿಸಿದೆ.
ಗೊಬ್ಬರ ತುಂಬಿದ್ದ ಲಾರಿ ಹಾಗೂ ಆಲ್ಲೋ ಕಾರಿನ ನಡುವೆ ಡಿಕ್ಕಿಯಾಗಿದೆ. ಅಪಘಾತದ ಭೀಕರತೆಗೆ ಕಾರು ಛಿದ್ರವಾಗಿದೆ. ಕಾರಿನ ಚಾಲಕ ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಕುಮಾರಸ್ವಾಮಿ, ಗಾಯತ್ರಿ ಸೇರಿದಂತೆ ಮಂಡ್ಯ ಮೂಲದ ನಾಲ್ವರು ಮೃತ ದುರ್ದೈವಿಗಳು. ಘಟನಾ ಸ್ಥಳಕ್ಕೆ ಕುಣಿಗಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.