2026-04-23 10:56:18

Horrific accident Newlymarried couple dies on the spot | ಭೀಕರ ಅಪಘಾತ ನವದಂಪತಿ ಸ್ಥಳದಲ್ಲೇ ಸಾವು | Speed News Kannada

Horrific accident Newlymarried couple dies on the spot | ಭೀಕರ ಅಪಘಾತ ನವದಂಪತಿ ಸ್ಥಳದಲ್ಲೇ ಸಾವು | Speed News Kannada

ಹಾವೇರಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನವದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಕಡಹಳ್ಳಿ ಗ್ರಾಮದಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ನವದಂಪತಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರನ್ನು ಕಾರ್ತಿಕ್ ಹೂಗಾರ (34) ಹಾಗೂ ಪತ್ನಿ ಐಶ್ವರ್ಯ (30) ಎಂದು ಗುರುತಿಸಲಾಗಿದೆ. ಮೃತರು ಹಾವೇರಿ ನಗರದ ನಿವಾಸಿಗಳು. ನವಜೋಡಿ ವಿವಾಹವಾಗಿ ಕೇವಲ ೧೫ ದಿನಗಳಾಗಿತ್ತು. ದೇವರ ದರ್ಶನಕ್ಕೆ ಹೋಗಿ ವಾಪಾಸ್ ಆಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ತಡಸ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.