ಹಾವೇರಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನವದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಕಡಹಳ್ಳಿ ಗ್ರಾಮದಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ನವದಂಪತಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರನ್ನು ಕಾರ್ತಿಕ್ ಹೂಗಾರ (34) ಹಾಗೂ ಪತ್ನಿ ಐಶ್ವರ್ಯ (30) ಎಂದು ಗುರುತಿಸಲಾಗಿದೆ. ಮೃತರು ಹಾವೇರಿ ನಗರದ ನಿವಾಸಿಗಳು. ನವಜೋಡಿ ವಿವಾಹವಾಗಿ ಕೇವಲ ೧೫ ದಿನಗಳಾಗಿತ್ತು. ದೇವರ ದರ್ಶನಕ್ಕೆ ಹೋಗಿ ವಾಪಾಸ್ ಆಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ತಡಸ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.