2026-06-27 12:06:01

Horrific Accident | ಮತ್ತೊಂದು ಭೀಕರ ಅಪಘಾತ ನಿಂತಿದ್ದ ಲಾರಿಗೆ ಕ್ಯಾಂಟರ್ ಡಿಕ್ಕಿ ಇಬ್ಬರು ಸ್ಥಳದಲ್ಲೇ ಸಾವು | SNK

Horrific Accident | ಮತ್ತೊಂದು ಭೀಕರ ಅಪಘಾತ ನಿಂತಿದ್ದ ಲಾರಿಗೆ ಕ್ಯಾಂಟರ್ ಡಿಕ್ಕಿ ಇಬ್ಬರು ಸ್ಥಳದಲ್ಲೇ ಸಾವು | SNK

ಧಾರವಾಡ: ನಿಂತಿದ್ದ ಲಾರಿಗೆ ಕ್ಯಾಂಟರ್ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಧಾರವಾಡ ತಾಲೂಕಿನ ಬೇಲೂರು ಗ್ರಾಮದ ಬಳಿ ನಡೆದಿದೆ. ಧಾರವಾಡ ತಾಲೂಕಿನ ಹಳೇ ತೇಗೂರಿನ ಷಣ್ಮುಖ ಜೋಗಿ(28), ಉತ್ತರ ಪ್ರದೇಶ ಮೂಲದ ಸಾಗರ್​(30) ಮೃತ ದುರ್ದೈವಿಗಳು. ಘಟನಾ ಸ್ಥಳಕ್ಕೆ ಗರಗ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಲಾರಿ ಟೈರ್ ಬ್ಲಾಸ್ಟ್‌ ಆಗಿದ್ದ ಹಿನ್ನೆಲೆಯಲ್ಲಿ ರಸ್ತೆ ಬದಿ ಲಾರಿ ನಿಲ್ಲಿಸಿ ಚಾಲಕ ಟೈರ್​​ ಬದಲಿಸುತ್ತಿದ್ದ. ಈ ವೇಳೆ ಅದೇ ಮಾರ್ಗದಲ್ಲಿ ವೇಗವಾಗಿ ಬಂದ ಕ್ಯಾಂಟರ್​​ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಅಪಘಾತದ ಭೀಕರತೆಗೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.