ಬೀದರ್ : ಬೀದರ್ ನಲ್ಲಿ ಭೀಕರವಾಗಿ ಕೊಲೆ ನಡೆದಿದ್ದು ಕೊಡಲಿಯಿಂದ ಕೊಚ್ಚಿ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಹಾಲಗೂಟ ಗ್ರಾಮದಲ್ಲಿ ಈ ಒಂದು ಭೀಕರ ಕೊಲೆ ನಡೆದಿದ್ದು, ಸ್ನಾನ ಮಾಡುವಾಗ ಮನೆಗೆ ನುಗ್ಗಿ ದುಷ್ಕರ್ಮಿ ಕೊಲೆಗೈದಿದ್ದಾನೆ.
ಹತ್ಯೆಯಾದ ಮಹಿಳೆಯನ್ನು ಅನಿತಾ (32) ಎಂದು ತಿಳಿದುಬಂದಿದೆ. ಕೈಲಾಶ್ ವೈಜನಾಥ್ ಮಹಿಳೆಯನ್ನು ಕೊಡಲಿಯಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿದ್ದಾನೆ ಎನ್ನುವ ಶಂಕೆ ವ್ಯಕ್ತವಾಗುತ್ತಿದೆ. ಕಟಕ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಕೊಲೆ ನಡೆದಿದೆ. ಮಹಿಳೆ ಮನೆಯಲ್ಲಿ ಇದ್ದಾಗ ಸ್ನಾನ ಮಾಡುವ ಸಂದರ್ಭದಲ್ಲಿ ಮಾಡಲಾಗಿದೆ. ಸಂಬಂಧಿಕರ ಆಕ್ರಂದನ ಇದೀಗ ಮುಗಿಲು ಮುಟ್ಟಿದೆ. ಯಾವ ಕಾರಣಕ್ಕಾಗಿ ಕೊಲೆ ನಡೆದಿದೆ ಎನ್ನುವುದು ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.