2026-09-13 12:45:51

Horrific Murder in Bidar | ಬೀದರ್ ನಲ್ಲಿ ಭೀಕರ ಮರ್ಡರ್ ಸ್ನಾನ ಮಾಡುವಾಗಲೇ ಕೊಡಲಿಯಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ! | SNK

 Horrific Murder in Bidar | ಬೀದರ್ ನಲ್ಲಿ ಭೀಕರ ಮರ್ಡರ್ ಸ್ನಾನ ಮಾಡುವಾಗಲೇ ಕೊಡಲಿಯಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ! | SNK

ಬೀದರ್ : ಬೀದರ್ ನಲ್ಲಿ ಭೀಕರವಾಗಿ ಕೊಲೆ ನಡೆದಿದ್ದು ಕೊಡಲಿಯಿಂದ ಕೊಚ್ಚಿ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಹಾಲಗೂಟ ಗ್ರಾಮದಲ್ಲಿ ಈ ಒಂದು ಭೀಕರ ಕೊಲೆ ನಡೆದಿದ್ದು, ಸ್ನಾನ ಮಾಡುವಾಗ ಮನೆಗೆ ನುಗ್ಗಿ ದುಷ್ಕರ್ಮಿ ಕೊಲೆಗೈದಿದ್ದಾನೆ. 

ಹತ್ಯೆಯಾದ ಮಹಿಳೆಯನ್ನು ಅನಿತಾ (32) ಎಂದು ತಿಳಿದುಬಂದಿದೆ. ಕೈಲಾಶ್ ವೈಜನಾಥ್ ಮಹಿಳೆಯನ್ನು ಕೊಡಲಿಯಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿದ್ದಾನೆ ಎನ್ನುವ ಶಂಕೆ ವ್ಯಕ್ತವಾಗುತ್ತಿದೆ. ಕಟಕ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಕೊಲೆ ನಡೆದಿದೆ. ಮಹಿಳೆ ಮನೆಯಲ್ಲಿ ಇದ್ದಾಗ ಸ್ನಾನ ಮಾಡುವ ಸಂದರ್ಭದಲ್ಲಿ ಮಾಡಲಾಗಿದೆ. ಸಂಬಂಧಿಕರ ಆಕ್ರಂದನ ಇದೀಗ ಮುಗಿಲು ಮುಟ್ಟಿದೆ. ಯಾವ ಕಾರಣಕ್ಕಾಗಿ ಕೊಲೆ ನಡೆದಿದೆ ಎನ್ನುವುದು ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.