2026-07-23 08:27:20

Huge upheaval in global oil markets|ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಭಾರಿ ಸಂಚಲನ|Speed News Kannada

Huge upheaval in global oil markets|ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಭಾರಿ ಸಂಚಲನ|Speed News Kannada

ಜಾಗತಿಕ ತೈಲ ಬಿಕ್ಕಟ್ಟಿನ ನಡುವೆ ಯುನೈಟೆಡ್ ಅರಬ್ ಎಮಿರೇಟ್ಸ್  ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದ್ದು, ಒಪೆಕ್ ಮತ್ತು ಒಪೆಕ್+ ಸಂಘಟನೆಗಳಿಂದ ಅಧಿಕೃತವಾಗಿ ಹಿಂದೆ ಸರಿದಿದೆ. ಈ ನಿರ್ಧಾರವನ್ನು ಸಂಪೂರ್ಣ ಸ್ವತಂತ್ರವಾಗಿ ತೆಗೆದುಕೊಳ್ಳಲಾಗಿದೆ ಎಂದು ಯುಎಇಯ ಇಂಧನ ಸಚಿವರು ಸ್ಪಷ್ಟಪಡಿಸಿದ್ದಾರೆ.

ಈ ನಿರ್ಧಾರವು ಒಪೆಕ್ ಸಂಘಟನೆಗೆ ದೊಡ್ಡ ಹಿನ್ನಡೆಯಾಗಿ ಪರಿಣಮಿಸಿದೆ. ಈಗಾಗಲೇ ಹಾರ್ಮುಜ್ ಜಲಸಂಧಿಯ ತೊಂದರೆಗಳು ಮತ್ತು ತೈಲ ಪೂರೈಕೆಯ ಸವಾಲುಗಳನ್ನು ಎದುರಿಸುತ್ತಿರುವ ಒಪೆಕ್‌ಗೆ, ಯುಎಇಯ ನಿರ್ಗಮನವು ಅನಿಶ್ಚಿತತೆಯನ್ನು ಹೆಚ್ಚಿಸಿದೆ. ಇತ್ತ, ಒಪೆಕ್‌ನ ಪ್ರಭಾವವನ್ನು ತಗ್ಗಿಸಲು ಪ್ರಯತ್ನಿಸುತ್ತಿದ್ದ ಅಮೆರಿಕದ ದೃಷ್ಟಿಯಲ್ಲಿ ಇದು ದೊಡ್ಡ ರಾಜತಾಂತ್ರಿಕ ಗೆಲುವಾಗಿ ಕಂಡುಬರುತ್ತಿದೆ. ರಾಷ್ಟ್ರೀಯ ಹಿತಾಸಕ್ತಿ ಮತ್ತು ಮಾರುಕಟ್ಟೆಯ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಯುಎಇ ಸರ್ಕಾರ ತಿಳಿಸಿದ್ದು, ಮುಂದಿನ ದಿನಗಳಲ್ಲಿ ಜಾಗತಿಕ ತೈಲ ಮಾರುಕಟ್ಟೆಯ ಮೇಲೆ ಇದು ಯಾವ ರೀತಿಯ ಪರಿಣಾಮ ಬೀರಲಿದೆ ಎಂಬುದು ಕುತೂಹಲ ಮೂಡಿಸಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.