2026-06-25 02:10:33

Husband arrested for strangling wife, running over body with car | ಪತ್ನಿಯನ್ನು ಕತ್ತು ಕೊಯ್ದು ಹತ್ಯೆ, ಶವದ ಮೇಲೆ ಕಾರು ಹಾಯಿಸಿದ ಪತಿಯ ಬಂಧನ | Speed news kannada

Husband arrested for strangling wife, running over body with car | ಪತ್ನಿಯನ್ನು ಕತ್ತು ಕೊಯ್ದು ಹತ್ಯೆ, ಶವದ ಮೇಲೆ ಕಾರು ಹಾಯಿಸಿದ ಪತಿಯ ಬಂಧನ | Speed news kannada

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಬಳೂರಗಿ ಗ್ರಾಮದ ಬಳಿ ಹಾಡಹಗಲೇ ಕತ್ತು ಕೊಯ್ದು ಪತ್ನಿಯನ್ನ  ಕೊಲೆ ಮಾಡಿರುವ ಘಟನೆ ನಡೆದಿದೆ. ಮಹಾರಾಷ್ಟ್ರ ಮೂಲದ ಶೈಲಾ (28) ಎಂಬ ಮಹಿಳೆಯನ್ನು ಆಕೆಯ ಪತಿ ಅಕ್ಷಯ್ ನಿರ್ದಯವಾಗಿ ಕರೆತಂದು ಹತ್ಯೆ ಮಾಡಿದ್ದಾನೆ.

ಆರೋಪಿ ಅಕ್ಷಯ್ ತನ್ನ ಎರ್ಟಿಗಾ ಕಾರಿನಲ್ಲಿ ಪತ್ನಿಯನ್ನು ಕರೆದುಕೊಂಡು ಬಂದು, ಬಳೂರಗಿ ಗ್ರಾಮದ ಬಳಿ ವಾಹನ ನಿಲ್ಲಿಸಿದ್ದಾನೆ. ನಂತರ ಪತ್ನಿಯನ್ನು ಬಲವಂತವಾಗಿ ಕಾರಿನಿಂದ ಕೆಳಗಿಳಿಸಿ, ನಡುರಸ್ತೆಯಲ್ಲೇ ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ. ಹತ್ಯೆಯ ಬಳಿಕ ಶವದ ಮೇಲೆ ಕಾರು ಹಾಯಿಸಿ ವಿಕೃತಿ ಮೆರೆದಿದ್ದಾನೆ. ಈ ಘಟನೆ ಸ್ಥಳೀಯರೊಬ್ಬರ ಮೊಬೈಲ್‌ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಕೊಲೆಮಾಡುವ ದೃಶ್ಯ ಎದೆ ಝಲ್‌ ಎನ್ನಿಸುವಂತಿದೆ. ಘಟನೆಯ ಕುರಿತು ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ಮುಂದುವರಿಸಿದ್ದಾರೆ. ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಪತ್ನಿಯ ಅನೈತಿಕ ಸಂಬಂಧದ ಅನುಮಾನದಿಂದ ಕೋಪಗೊಂಡು ಈ ಕೃತ್ಯಕ್ಕೆ ಮುಂದಾಗಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ.

 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.