2026-03-07 08:39:24

Husband brutally murders wife by throwing a stone at her head | ಪತ್ನಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಪತಿಯಿಂದಲೇ ಬರ್ಬರ ಹತ್ಯೆ | Speed News Kannada

Husband brutally murders wife by throwing a stone at her head | ಪತ್ನಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಪತಿಯಿಂದಲೇ ಬರ್ಬರ ಹತ್ಯೆ | Speed News Kannada

ರಾಮನಗರ: ಪತ್ನಿಯ ಶೀಲ ಶಂಕಿಸಿ ಪತಿಯೇ ಪತ್ನಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕುಳ್ಳೇಗೌಡನಪಾಳ್ಯದಲ್ಲಿ ನಡೆದಿದೆ.ಸಿಂಚನ (21) ಕೊಲೆಯಾದ ಮಹಿಳೆಯಾದರೆ ಪತಿ ರೇಣುಕಯ್ಯ ಪತ್ನಿಯ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಆರೋಪಿ.
ಪತ್ನಿಯ ಶೀಲ ಶಂಕಿಸಿ ರೇಣುಕಯ್ಯ ಮನೆಯಲ್ಲಿ ಯಾವಾಗಲೂ ಗಲಾಟೆ ಮಾಡುತ್ತಿದ್ದ. ಅದರಂತೆ ಶುಕ್ರವಾರವೂ ಕೂಡ (ಫೆ.20) ಕೂಡ ಕುಡಿದು ಗಲಾಟೆ ನಡೆಸಿದ್ದ. ಗಲಾಟೆಯ ಭರದಲ್ಲಿ ಮನೆಯ ಮುಂದಿದ್ದ ಕಲ್ಲು ತಂದು ಅದನ್ನು ಪತ್ನಿಯ ತಲೆ ಮೇಲೆ ಎತ್ತಿಹಾಕಿ ಕೊಲೆ ಮಾಡಿದ್ದಾನೆ. ಬಳಿಕ ಆತ ಸ್ಥಳದಿಂದ ಎಸ್ಕೆಪ್ ಆಗಿದ್ದಾನೆ.
ವಿಷಯ ತಿಳಿದು ಸ್ಥಳಕ್ಕೆ ಕಗ್ಗಲೀಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ರವಾನೆ ಮಾಡಲಾಗಿದ್ದು, ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.