2026-06-25 03:58:51

Husband commits suicide by stabbing his pregnant wife | ರಾಜ್ಯದಲ್ಲಿ ಭೀಕರ ಘಟನೆ ಗರ್ಭಿಣಿ ಪತ್ನಿಗೆ ಚಾಕು ಇರಿದು ಪತಿ ಆತ್ಮಹ*ತ್ಯೆ | Speed News Kannada

Husband commits suicide by stabbing his pregnant wife | ರಾಜ್ಯದಲ್ಲಿ ಭೀಕರ ಘಟನೆ ಗರ್ಭಿಣಿ ಪತ್ನಿಗೆ ಚಾಕು ಇರಿದು ಪತಿ ಆತ್ಮಹ*ತ್ಯೆ | Speed News Kannada

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೊಬ್ಬ ತನ್ನ ಗರ್ಭಿಣಿ ಪತ್ನಿಗೆ ಚಾಕುವಿನಿಂದ ಇರಿದು ನಂತರ ತಾನು ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಮದುರ್ಗ ಪಟ್ಟಣದ ನಿವಾಸಿ ಉಮೇಶ ಬಡಿಗೇರ (34) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.
ಕ್ಷುಲ್ಲಕ ಕಾರಣಕ್ಕೆ ಪತ್ನಿ ಜೊತೆ ಉಮೇಶ ಸಾರಾಯಿ ಕುಡಿದು ಬಂದು ಜಗಳ ಮಾಡುತ್ತಿದ್ದ. ಮೊನ್ನೆ ಮತ್ತೆ ಜಗಳ ಆಗಿದೆ. ಈ ವೇಳೆ ಜಗಳ ವಿಕೋಪಕ್ಕೆ ಹೋಗಿದ್ದು, ಪತ್ನಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾನೆ. ಬಳಿಕ ತಾನು ಕೂಡ ಬಾವಿಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಗಂಭೀರವಾಗಿ ಗಾಯಗೊಂಡಿರುವ ಪತ್ನಿಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಗರ್ಭಿಣಿ ಹೆಂಡತಿ ಜತೆ ಜಗಳ ಮಾಡುತ್ತಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪೊಲೀಸ ಮತ್ತು ಅಗ್ನಿಶಾಮಕ ದಳದವರು ಶವವನ್ನು ಬಾವಿಯಿಂದ ಹೊರತೆಗೆದಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.