2026-09-13 11:38:54

Husband kills wife and two children | ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಂದು ಪತಿ ಆತ್ಮಹತ್ಯೆ | SNK

Husband kills wife and two children | ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಂದು ಪತಿ ಆತ್ಮಹತ್ಯೆ | SNK

ಹುಣಸೂರು, ಜು.21- ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ನಂತರ ಪತಿಯೂ ಕೂಡಾ ನೇಣು ಬಿಗಿದುಕೊಂಡು ಆತಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಪಟ್ಟಣದ ನ್ಯೂ ಮಾರುತಿ ಬಡಾವಣೆಯಲ್ಲಿ ನಡೆದಿದೆ. ನಿಶ್ಚಿತ (35), ಒಂದನೇ ತರಗತಿ ಹಾಗೂ ಏಳನೇ ತರಗತಿಯಲ್ಲಿ ಓದುತ್ತಿರುವ ಮಕ್ಕಳಿಬ್ಬರನ್ನು ಕೊಲೆ ಮಾಡಿ ಪತಿ ಹರೀಶ (40) ಆತಹತ್ಯೆ ಮಾಡಿಕೊಂಡಿದ್ದಾನೆ.ಪತ್ನಿ ಹಾಗೂ ಮಕ್ಕಳಿಗೆ ಟೇಪ್‌ನಿಂದ ಬಾಯಿಗೆ ಸುತ್ತಿ ಉಸಿರುಗಟ್ಟಿಸಿ ಕೊಲೆ ಮಾಡಿದ ಬಳಿಕ ಮನೆಯ ಮೇಲ್ಭಾಗದ ಕೊಠಡಿಗೆ ತೆರಳಿ ಆತನೂ ಕೂಡಾ ನೇಣು ಬಿಗಿದುಕೊಂಡು ಆತಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಭೀಕರ ಕೃತ್ಯಕ್ಕೆ ಕಾರಣ ಏನು ಎಂಬುದು ನಿಗೂಢವಾಗಿದೆ.ಸುದ್ದಿ ತಿಳಿಯುತ್ತಿದ್ದಂತೆ ಹುಣಸೂರು ನಗರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದು, ತನಿಖೆಯ ನಂತರವಷ್ಟೇ ಘಟನೆಗೆ ಕಾರಣ ಏನೆಂಬುದು ತಿಳಿದುಬರಲಿದೆ. ಈ ಭೀಕರ ಕೃತ್ಯದಿಂದ ಇಡೀ ಹುಣಸೂರು ಪಟ್ಟಣವೇ ಬೆಚ್ಚಿಬಿದ್ದಿದೆ. ಸ್ಥಳಕ್ಕೆ ಹಿರಿಯ ಪೊಲೀಸ್‌‍ ಅಧಿಕಾರಿಗಳು ಭೇಟಿ ನೀಡಿದ್ದು, ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಹುಣಸೂರು, ಜು.21- ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ನಂತರ ಪತಿಯೂ ಕೂಡಾ ನೇಣು ಬಿಗಿದುಕೊಂಡು ಆತಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಪಟ್ಟಣದ ನ್ಯೂ ಮಾರುತಿ ಬಡಾವಣೆಯಲ್ಲಿ ನಡೆದಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.