2026-04-23 04:45:08

Husband strangles wife to death | ಬೆಂಗಳೂರಲ್ಲಿ ಪತ್ನಿಯನ್ನು ಉಸಿರುಗಟ್ಟಿಸಿ ಕೊಂದು ತಾನು ಆತ್ಮಹತ್ಯೆಗೆ ಶರಣಾದ ಪತಿ | Speed News Kannada

Husband strangles wife to death | ಬೆಂಗಳೂರಲ್ಲಿ ಪತ್ನಿಯನ್ನು ಉಸಿರುಗಟ್ಟಿಸಿ ಕೊಂದು ತಾನು ಆತ್ಮಹತ್ಯೆಗೆ ಶರಣಾದ ಪತಿ | Speed News Kannada

ಬೆಂಗಳೂರು : ಬೆಂಗಳೂರಿನ ಆರ ಟಿ ನಗರದಲ್ಲಿ ನಿನ್ನೆ ಗಂಡ ಹೆಂಡತಿ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಆ ಒಂದು ಕೇಸೆ ಟ್ವಿಸ್ಟ್ ಸಿಕ್ಕಿದ್ದು, ಪತ್ನಿಯನ್ನು ಕೊಲೆ ಮಾಡಿ ಪತಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೊಲೀಸರ ತನಿಖೆಯಲ್ಲಿ ತಿಳಿದು ಬಂದಿದೆ. ಪತ್ನಿಯನ್ನು ಉಸಿರುಗಟ್ಟಿಸಿ ಸುಮಿತ್ರಾಳನ್ನು ಕೊಲೆ ಮಾಡಿರುವ ಪತಿ ಡೇವಿಡ್ ಬಳಿಕ ತಾನು ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರ ತನಿಖೆಯ ವೇಳೆ ಸತ್ಯ ಬಹಿರಂಗವಾಗಿದೆ.
ಸುಮಿತ್ರ ತಂಗಿ ಕರೆ ಮಾಡಿದರು ಕೂಡ ಕರೆ ಸ್ವೀಕರಿಸಲಿಲ್ಲ ನಂತರ ಮನೆಗೆ ಬಂದು ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ.
ಸದ್ಯ ಮೃತ ದೇಹಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಆರ್ ಟಿ ನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಮತ್ತು ಆತ್ಮಹತ್ಯೆ ಪ್ರಕರಣ ದಾಖಲಾಗಿದೆ. ಇನ್ನು ಬಲವಂತವಾಗಿ ಡೇವಿಡ್ ಸುಮಿತ್ರಾಳನ್ನು ಕೊಲೆ ಮಾಡಿದ್ದಾನೆ ಎನ್ನುವಂತಹ ಮಾಹಿತಿ ಲಭ್ಯವಾಗಿದೆ. ಕೊಲೆ ಮಾಡುವುದಕ್ಕೂ ಮುಂಚೆ ಸುಮಿತ್ರ ಡೇವಿಡ್ ಕೈ ಪರಚಿರುವುದು ಪತ್ತೆಯಾಗಿದೆ . ಬಳಿಕ ಆಕೆಯನ್ನು ಕೊಂದು ಡೇವಿಡ್ ಸಹ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.