2026-03-07 06:28:38

I condemn Americas contradictory stance | ಅಮೆರಿಕಾದ ತದ್ವಿರುದ್ಧ ನಿಲುವನ್ನು ಖಂಡಿಸುತ್ತೇನೆ ಸಿಎಂ ಸಿದ್ದರಾಮಯ್ಯ | Speed News Kannada

I condemn Americas contradictory stance | ಅಮೆರಿಕಾದ ತದ್ವಿರುದ್ಧ ನಿಲುವನ್ನು ಖಂಡಿಸುತ್ತೇನೆ ಸಿಎಂ ಸಿದ್ದರಾಮಯ್ಯ | Speed News Kannada

ಶಿವಮೊಗ್ಗ: ರಾಜ್ಯ ಸರ್ಕಾರ  ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ  ಕನ್ನಡಿಗರಿಗೆ ತೊಂದರೆಯಾಗದಂತೆ  ಕರೆತರಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಮುಖ್ಯ ಮಂತ್ರಿ  ಸಿದ್ದರಾಮಯ್ಯ ತಿಳಿಸಿದರು.
ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.
ಅರಬ್ ದೇಶಗಳಲ್ಲಿ ಸಿಲುಕಿರುವ ಬಳ್ಳಾರಿಯ 30 ಜನರನ್ನು ವಾಪಸ್ಸು ಕರೆತರಲಾಗುವುದು ಎಂದು ಹೇಳಿದರಲ್ಲದೆ ದುಬೈ ನಲ್ಲಿರುವ ಭಾರತೀಯರು ಸುರಕ್ಷಿತವಾಗಿದ್ದಾರೆ. ಕನ್ನಡಿಗರನ್ನು ಸುರಕ್ಷಿತವಾಗಿ ವಾಪಸ್ಸು ಕರೆತರಲಾಗುವುದು ಎಂದು ಹೇಳಿದರು.
ಅರಬ್ ದೇಶಗಳಲ್ಲಿ ವಾಸಿಸುತ್ತಿರುವ ಕನ್ನಡಿಗರ ಸುರಕ್ಷತೆಯ ಬಗ್ಗೆ ಮುಖ್ಯ ಕಾರ್ಯದರ್ಶಿ, ಸ್ಥಾನಿಕ ಆಯುಕ್ತರೊಂದಿಗೆ ಚರ್ಚಿಸಲಾಗಿದೆ. ದುಬೈ ವಿಮಾನ ನಿಲ್ದಾಣ ಬಂದ್ ಮಾಡಲಾಗಿದ್ದು, ಅದನ್ನು ತೆರೆದ ಮೇಲೆ ಅವರನ್ನು ಭಾರತಕ್ಕೆ ಸುರಕ್ಷಿತವಾಗಿ  ಕರೆ ತರಲು ವ್ಯವಸ್ಥೆ ಮಾಡಲಾಗುವುದು. ವಿಧಾನ ಪರಿಷತ್ ಸದಸ್ಯ ಭೋಜೇಗೌಡರು  ದುಬೈದಲ್ಲಿದ್ದು, ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದೇನೆ ಹೋಟೆಲಿನಲ್ಲಿ ಸುರಕ್ಷಿತವಾಗಿರುವುದಾಗಿ ಹೇಳಿದ್ದಾರೆ ಎಂದರು. 
ಅಮೆರಿಕಾ ಇರಾನ್ ಮೇಲೆ ಮಾಡಿರುವ ದಾಳಿ ಅನಗತ್ಯವಾದುದು. ಒಂದೆಡೆ ಶಾಂತಿ ಮಾತ್ರ ಪಠಿಸುವ ಅಮೆರಿಕಾ ಮತ್ತೊಂದೆಡೆ  ಯುದ್ಧ ಮಾಡುತ್ತದೆ. ಅಮೆರಿಕಾ ತದ್ವಿರುದ್ಧವಾದ ನಿಲುವು ಹೊಂದಿದ್ದು, ಇದನ್ನು ಖಂಡಿಸುವುದಾಗಿ ತಿಳಿಸಿದರು. 
ಇರಾನ್ ಅಧ್ಯಕ್ಷ ಆಯಾತೊಲ್ಲಾ ಖಮೇನಿ ಹತ್ಯೆಯಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದರು.
ಏಪ್ರಿಲ್ ನಲ್ಲಿ ವಿದ್ಯುತ್ ದರ ಏರಿಕೆಯ ಪ್ರಸ್ತಾಪದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಸದ್ಯಕ್ಕೆ ಸರ್ಕಾರದ ಮುಂದೆ ಆ ಪ್ರಸ್ತಾಪವಿಲ್ಲ ಎಂದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.