2026-07-20 01:35:35

I have lost my God Revanna sobbed uncontrollably | ನನ್ನ ದೇವರನ್ನೇ ಕಳೆದುಕೊಂಡೆ ಬಿಕ್ಕಿಬಿಕ್ಕಿ ಅತ್ತ ರೇವಣ್ಣ! | SNK

I have lost my God Revanna sobbed uncontrollably | ನನ್ನ ದೇವರನ್ನೇ ಕಳೆದುಕೊಂಡೆ ಬಿಕ್ಕಿಬಿಕ್ಕಿ ಅತ್ತ ರೇವಣ್ಣ! | SNK

ಬೆಂಗಳೂರು : ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಅಂತಿಮ ಯಾತ್ರೆ ಬೆಂಗಳೂರಿನಿಂದ ಹೊಳೆನರಸೀಪುರದ ವರೆಗೆ ನಡೆಯಲಿದೆ. ಅಂತಿಮ ಯಾತ್ರೆ ಮಾರ್ಗ ಮಧ್ಯೆ 10 ಕಡೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಕೆಲವೇ ಹೊತ್ತಲ್ಲಿ ಬೆಂಗಳೂರಿನಿಂದ ಅಂತಿಮ ಯಾತ್ರೆ ಹೊರಡಲಿದೆ.

ಹಾಸನ ಜಿಲ್ಲೆಯ ಹರದನಹಳ್ಳಿಯ ಮಾವಿನಕೆರೆ ರಂಗನಾಥ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ತಾಯಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ನಡೆಯಲಿರುವ ಜಾಗವನ್ನು ಪುತ್ರ, ಶಾಸಕ ಹೆಚ್​​.ಡಿ. ರೇವಣ್ಣ ಪರಿಶೀಲನೆ ಮಾಡಿದ್ದು, ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡುವಾಗ ಅಮ್ಮನನ್ನು ನೆನೆದು ಭಾವುಕರಾಗಿದ್ದಾರೆ.

'ತಾಯಿ ಚೆನ್ನಮ್ಮ ನನಗೆ ದೇವತೆ ಸಮಾನ. ನನ್ನ ದೇವರನ್ನೇ ಕಳೆದುಕೊಂಡೆ ಎಂದು ಬಿಕ್ಕಿಬಿಕ್ಕಿ ಅತ್ತಿದ್ದಾರೆ. ಎಷ್ಟೋ ಜನರಿಗೆ ಅನ್ನ ಹಾಕಿದ ಕೈಅವರದು. ಕೊನೆಯದಾಗಿ ತಿರುಪತಿ ಪ್ರಸಾದ ಕೊಟ್ಟು ಮಾತನಾಡಿಸಿದ್ದೆ. ವೈದ್ಯರು ನಿನ್ನೆ ಬೆಳಗ್ಗೆ ಚೆನ್ನಮ್ಮ ಗುಣಮುಖ ಆಗ್ತಾರೆ ಎಂದಿದ್ದರು. ಆದರೆ ಅವರು ಬದುಕಿ ಬರಲಿಲ್ಲ ಎಂದು ಹೇಳುತ್ತಲೇ ಉಮ್ಮಳಿಸಿ ಬಂದ ದುಃಖ ತಡೆಯಲಾರದೆ ರೇವಣ್ಣ ಕಣ್ಣೀರಿಟ್ಟಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.