2026-03-07 06:13:21

IAS officer Rohini Sindhu suffers setback in High Court | ಮಾನನಷ್ಟ ಪ್ರಕರಣ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಹೈಕೋರ್ಟ್‌ ನಲ್ಲಿ ಹಿನ್ನೆಡೆ | Speed News Kannada

IAS officer Rohini Sindhu suffers setback in High Court | ಮಾನನಷ್ಟ ಪ್ರಕರಣ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಹೈಕೋರ್ಟ್‌ ನಲ್ಲಿ ಹಿನ್ನೆಡೆ | Speed News Kannada

ಬೆಂಗಳೂರು: ಮಾನನಷ್ಟ ಪ್ರಕರಣದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಹೈಕೋರ್ಟ್‌ ನಲ್ಲಿ ಹಿನ್ನೆಡೆ ಉಂಟಾಗಿದೆ. 
ರೋಹಿಣಿ ಅವರು ತಮ್ಮನ್ನು ಕುರಿತು ಅವಹೇಳನಕಾರಿಯಾಗಿ ಮಾತನಾಡಿ ಆ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ ಎಂದು ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಬೆಂಗಳೂರಿನ 7ನೇ ಎಸಿಎಂಎಂ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ಈ ದೂರನ್ನುರದ್ದುಪಡಿಸುವಂತೆ ಕೋರಿ ಸಲ್ಲಿಸಿದ್ದರೂಪಾ ಅವರು ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ವಜಾಗೊಳಿಸಿದೆ.
ರೋಹಿಣಿ ಸಿಂಧೂರಿ ವಿರುದ್ಧ ರೂಪಾ ಮೌದ್ಗಿಲ್ ದಾಖಲಿಸಿದ್ದ ಮಾನನಷ್ಟ ಪ್ರಕರಣಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿತ್ತು. ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ವಿಚಾರಣೆಗೆ ತಡೆ ನೀಡಿ, ರಾಜಿ ಸಂಧಾನಕ್ಕೆ ಪ್ರಯತ್ನಿಸುವಂತೆ ಸಲಹೆ ನೀಡಿದ್ದರು.
2023ರಲ್ಲಿ ರೂಪಾ ಅವರು 7ನೇ ಎಸಿಎಂಎಂ ಕೋರ್ಟ್‌ನಲ್ಲಿ ದೂರು ದಾಖಲಿಸಿದ್ದರು. ಈ ವಿವಾದ ಎರಡು ವರ್ಷಗಳಿಂದ ಮುಂದುವರಿದಿದ್ದು, ಸುಪ್ರೀಂ ಕೋರ್ಟ್‌ನಿಂದ ಮತ್ತೆ ವಿಚಾರಣಾ ನ್ಯಾಯಾಲಯಕ್ಕೆ ವಾಪಸ್ ಕಳುಹಿಸಲಾಗಿತ್ತು. ಈ ಪ್ರಕರಣ ರದ್ದುಪಡಿಸುವಂತೆ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಇಂದು ತಿರಸ್ಕರಿಸಿದೆ.
2023ರ ಫೆಬ್ರವರಿ 19ರಂದು ರೋಹಿಣಿ ಸಿಂಧೂರಿ ಮಾಧ್ಯಮಗಳಿಗೆ ನೀಡಿದ ಹೇಳಿಕೆಯನ್ನು ನಂತರ ‘ಎಕ್ಸ್’ ಜಾಲತಾಣದಲ್ಲಿ ಹಂಚಿಕೊಂಡಿದ್ದರು.  ಅದರಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಆರೋಪಗಳನ್ನು ಮಾಡಿದ್ದಾರೆ ಎಂದು ರೂಪಾ ಆರೋಪಿಸಿದ್ದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.