2026-06-25 03:58:16

Illegal assets worth Rs 14 crore found in engineers house in Belgaum|ಬೆಳಗಾವಿಯ ಇಂಜಿನಿಯರ್ ಮನೆಯಲ್ಲಿ 14 ಕೋಟಿ ಅಕ್ರಮ ಆಸ್ತಿ ಪತ್ತೆ|Speed News Kannada

Illegal assets worth Rs 14 crore found in engineers house in Belgaum|ಬೆಳಗಾವಿಯ ಇಂಜಿನಿಯರ್ ಮನೆಯಲ್ಲಿ 14 ಕೋಟಿ ಅಕ್ರಮ ಆಸ್ತಿ ಪತ್ತೆ|Speed News Kannada

ಬೆಳಗಾವಿಯ ನಗರಾಭಿವೃದ್ಧಿ ಕೋಶದ (DUDC) ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅಜಯಸಿಂಗ್ ರಜಪೂತ್ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ಇತ್ತೀಚೆಗೆ ನಡೆಸಿದ ದಾಳಿಯಲ್ಲಿ ಸುಮಾರು 14 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಕ್ರಮ ಆಸ್ತಿ ಪತ್ತೆಯಾಗಿದೆ. ಬೆಳಗಾವಿಯ ಆಂಜನೇಯ ನಗರ ಸೇರಿದಂತೆ ಒಟ್ಟು ಏಳು ಕಡೆಗಳಲ್ಲಿ ಏಕಕಾಲಕ್ಕೆ ನಡೆದ ಈ ಕಾರ್ಯಾಚರಣೆಯಲ್ಲಿ ಸವದತ್ತಿ, ಹುಕ್ಕೇರಿ ಹಾಗೂ ಹುಬ್ಬಳ್ಳಿಯಲ್ಲಿರುವ ಸುಮಾರು 18 ನಿವೇಶನಗಳ ದಾಖಲೆಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಅಜಯಸಿಂಗ್ ಅವರು ಹೊಂದಿರುವ ಅಗಾಧ ಪ್ರಮಾಣದ ಆಸ್ತಿಯನ್ನು ಕಂಡು ಸ್ವತಃ ದಾಳಿ ನಡೆಸಿದ ಅಧಿಕಾರಿಗಳೇ ಅಚ್ಚರಿಗೊಂಡಿದ್ದಾರೆ.

ಶೋಧಕಾರ್ಯದ ವೇಳೆ ಮನೆಯಲ್ಲಿ ಸುಮಾರು 5.96 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 3.12 ಕೋಟಿ ರೂಪಾಯಿಗಳ ಬ್ಯಾಂಕ್ ಡೆಪಾಸಿಟ್ ಹಾಗೂ ಐಷಾರಾಮಿ ಕಾರು ಮತ್ತು ಬೈಕ್‌ಗಳು ಪತ್ತೆಯಾಗಿವೆ. ಕಳೆದ ಬುಧವಾರದಿಂದಲೇ ಈ ತನಿಖೆ ಆರಂಭವಾಗಿದ್ದು, ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿರುವ ಹಿನ್ನೆಲೆಯಲ್ಲಿ ತನಿಖೆ ತೀವ್ರಗೊಂಡಿದೆ. ಇನ್ನು ಕೆಲವು ಬ್ಯಾಂಕ್ ಲಾಕರ್‌ಗಳ ಪರಿಶೀಲನೆ ಬಾಕಿ ಇರುವುದರಿಂದ, ಮುಂದಿನ ದಿನಗಳಲ್ಲಿ ಅಕ್ರಮ ಆಸ್ತಿಯ ಮೊತ್ತ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.