2026-06-25 03:48:12

Illegal sale of intoxicating pills Fancy store owner arrested | ನಶೆ ನೀಡುವ ಮಾತ್ರೆಗಳ ಅಕ್ರಮ ಮಾರಾಟ ಫ್ಯಾನ್ಸಿ ಸ್ಟೋರ್ ಮಾಲೀಕನ ಬಂಧನ | Speed News Kannada

Illegal sale of intoxicating pills Fancy store owner arrested | ನಶೆ ನೀಡುವ ಮಾತ್ರೆಗಳ ಅಕ್ರಮ ಮಾರಾಟ ಫ್ಯಾನ್ಸಿ ಸ್ಟೋರ್ ಮಾಲೀಕನ ಬಂಧನ | Speed News Kannada

ಕೊಪ್ಪಳ: ಫ್ಯಾನ್ಸಿ ಸ್ಟೋರ್ ಒಂದರಲ್ಲಿ ನಶೆ ನೀಡುವ ಮಾತ್ರೆಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ  ನಗರದಲ್ಲಿ ಬೆಳಕಿಗೆ ಬಂದಿದೆ. ಯುವಕನೊಬ್ಬ ಅಸ್ವಸ್ಥಗೊಂಡಿದ್ದರಿಂದ ಈ ಘಟನೆ ಬೆಳಕಿಗೆ ಬಂದಿದ 3 ಗಂಗಾವತಿ ನಗರದ ದುರ್ಗಾದೇವಿ ಗುಡಿ ಸಮೀಪದಲ್ಲಿರುವ 'ಕೃಷ್ಣಾ ಫ್ಯಾನ್ಸಿ ಸ್ಟೋ‌ರ್'ನಲ್ಲಿ ನೋವು ನಿವಾರಕ ಮಾತ್ರೆ ಎಂದು ಹೇಳಿ ನಶೆ ಮಾತ್ರೆಗಳನ್ನು ಮಾರಾಟ ಮಾಡಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ. ಈ ಅಂಗಡಿಯ ಮಾಲೀಕ ಕಿಶನ್ ಕುಮಾರ್ ಕೇವಲ ಎರಡು ಮಾತ್ರೆಗಳಿಗೆ ಸುಮಾರು 300 ರೂಪಾಯಿ ವಸೂಲಿ ಮಾಡುತ್ತಿದ್ದಾನೆ ಎಂಬ ಮಾಹಿತಿ ದೊರೆತಿದೆ. ಈ ಮಾತ್ರೆಗಳನ್ನು ಖರೀದಿಸಿ ಸೇವಿಸುತ್ತಿದ್ದ ಕೆಲ ಯುವಕರು ಬಳಿಕ ಹೆಚ್ಚು 'ಕಿಕ್' ಪಡೆಯಲು ಅವನ್ನು ಪುಡಿ ಮಾಡಿ ಇಂಜೆಕ್ಷನ್ ಮೂಲಕ ನೇರವಾಗಿ ನರಗಳಿಗೆ ಹಾಕಿಕೊಳ್ಳಲು ಆರಂಭಿಸಿದ್ದರೆಂಬ ಸಂಗತಿ ಬಹಿರಂಗವಾಗಿದೆ. ಇಂತಹ ಇಂಜೆಕ್ಷನ್ ಬಳಕೆಯಿಂದ ಒಬ್ಬ ಯುವಕನ ಆರೋಗ್ಯ ಹದಗೆಟ್ಟಿದ್ದು, ಆತನೇ ಪೊಲೀಸರಿಗೆ ದೂರು ನೀಡಿದ್ದಾನೆ.
ಲಕ್ಷ್ಮಿ ಕ್ಯಾಂಪ್ ನಿವಾಸಿ ಸಂಗನಗೌಡ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿ ಗಂಗಾವತಿ ನಗರದ ಕೃಷ್ಣಾ ಫ್ಯಾನ್ಸಿ ಸ್ಟೋರ್ ಮೇಲೆ ದಾಳಿ ಮಾಡಿದ್ದಾರೆ. ಯುವಕರಿಗೆ ನಶೆ ಮಾತ್ರೆ ಪೂರೈಸುತ್ತಿದ್ದ ಆರೋಪದ ಮೇಲೆ ಅಂಗಡಿ ಮಾಲೀಕ ಕಿಶನ್ ಕುಮಾರ್ ಅನ್ನು ವಶಕ್ಕೆ ಪಡೆದಿದ್ದಾರೆ.
ಈ ಪ್ರಕರಣದ ಹಿಂದೆ ಸ್ಥಳೀಯ ಮೆಡಿಕಲ್ ಸ್ಟೋರ್ ಮಾಲೀಕರ ಕೈವಾಡವಿರುವ ಶಂಕೆಯೂ ವ್ಯಕ್ತವಾಗಿದೆ. ಈ ಸಂಬಂಧ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.