2026-03-07 05:20:21

in 2028 congress win 141 seats in karnataka shivakumar Speed News Kannada

in 2028 congress win 141 seats in karnataka shivakumar Speed News Kannada

ಹಾವೇರಿ: 2028ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ 141 ಸ್ಥಾನಗಳನ್ನು ಗಳಿಸಲಿದೆ. ಎಲ್ಲರೂ ಇದನ್ನು ಬರೆದಿಟ್ಟುಕೊಳ್ಳಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಹಾವೇರಿ ನಗರದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ರಾಜ್ಯ ಸರ್ಕಾರದ ಸಾವಿರ ದಿನಗಳ ಸಾಧನಾ ಸಮಾವೇಶ ಹಾಗೂ ‘ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ’ದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಹಾವೇರಿ ಜಿಲ್ಲೆಯ ಮತದಾರರು ಕಾಂಗ್ರೆಸ್‌ ಪಕ್ಷವನ್ನು ಮೆಚ್ಚಿ ಆರು ಶಾಸಕರನ್ನು ನಮಗೆ ಕೊಟ್ಟಿದ್ದಾರೆ. ಅವರಿಗೆ ವಂದನೆ ಹೇಳಲಿಕ್ಕಾಗಿಯೇ ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ. 2023 ರ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ 136 ಸೀಟುಗಳು ಬಂದಿದ್ದವು. ಮುಂದಿನ ಚುನಾವಣೆಯಲ್ಲಿ ನಮಗೆ 141 ಸೀಟುಗಳು ಬರಲಿವೆ. ನನಗೆ ಮತ್ತು ನಮ್ಮ ಶಾಸಕರಿಗೆ ಈ ಆತ್ಮವಿಶ್ವಾಸವಿದೆ ಎಂದರು.
3 ಕ್ಷೇತ್ರಗಳ ಉಪಚುನಾವಣೆಗಳಲ್ಲಿ ಎರಡು ಕಡೆ ಮಾಜಿ ಮುಖ್ಯಮಂತ್ರಿಗಳ ಪುತ್ರರು ಸ್ಪರ್ಧೆ ಮಾಡಿದ್ದರು. ಅವರು ಸೋತರು. ಆ ಮೂಲಕ ನಮ್ಮ ಸಂಖ್ಯಾಬಲವನ್ನು 139ಕ್ಕೆ ಏರಿಕೆ ಮಾಡಿದ್ದೀರಿ. ನಿಮಗೆಲ್ಲರಿಗೂ ಧನ್ಯವಾದ ಎಂದು ಹೇಳಿದರು.
ಬಿಜೆಪಿ, ಜೆಡಿಎಸ್ನವರು ಜನರಿಗಾಗಿ ಒಂದೇ ಒಂದು ಕಾರ್ಯಕ್ರಮ ಕೊಟ್ಟಿದ್ದಾರಾ ಎಂದು  ಆಕ್ರೋಶಭರಿತವಾಗಿ ಪ್ರಶ್ನಿಸಿದರು. ನಮ್ಮ ಸರ್ಕಾರಕ್ಕೆ 1 ಸಾವಿರ ದಿನಗಳಾಗಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಬದಲಾವಣೆಯ ಗಾಳಿ ಬೀಸಿದೆ. 5 ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಆಗಲಿಲ್ಲ. ಇಂದು ದೇಶದ ಗ್ಯಾರಂಟಿಯಾಗಿದೆ. ಗ್ಯಾರಂಟಿ ಯೋಜನೆಗಳು ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಸಾವಿಲ್ಲ, ಆದರೆ ಟೀಕೆ ಹಾಗೂ ಅಪಪ್ರಚಾರಕ್ಕೆ ಸಾವಿದೆ ಎಂದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.