ಗಾಂಧಿನಗರ: ಟ್ಯಾಂಕರ್‌ಗೆ ಡಿಕ್ಕಿಯಾಗಿ ಬಸ್ ಹೊತ್ತಿ ಉರಿದ ಪರಿಣಾಮ 4 ಮಂದಿ ಅಸುನೀಗಿರುವ ದುರಂತ ಘಟನೆ ಗುಜರಾತ್‌ನ ಸುರೇಂದ್ರನಗರ ಜಿಲ್ಲೆಯ ಚೋಟಿಲಾ-ರಾಜ್‌ಕೋಟ್ ರಾಷ್ಟ್ರೀಯ ಹೆದ್ದಾರಿಯ ಸಂಗನಿ ಎಂಬಲ್ಲಿ ಸಂಭವಿಸಿದೆ. ಇಂದು ನಸುಕಿನ ಜಾವ 2.30ರ ವೇಳೆಗೆ ಈ ದುರಂತ ನಡೆದಿದೆ. ಬಸ್‌ನಲ್ಲಿ 40 ಪ್ರಯಾಣಿಕರಿದ್ದರು. 4 ಮಂದಿ ಮೃತಪಟ್ಟು, 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಟ್ಯಾಂಕರ್ ನಲ್ಲಿ ಏನನ್ನು ಸಾಗಿಸಲಾಗುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿಲ್ಲ. ಆದರೆ ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ಎರಡೂ ವಾಹನಗಳು ಡಿಕ್ಕಿ ಹೊಡೆದ ಕೆಲವೇ ಸೆಕೆಂಡುಗಳಲ್ಲಿ ಹೊತ್ತಿ ಉರಿದಿವೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಕೆಲವು ಪ್ರಯಾಣಿಕರು ಬಸ್‌ನಿಂದ ಇಳಿದು ಪಾರಾಗಿದ್ದಾರೆ.
ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ತೆರಳಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಗಾಯಗೊಂಡವರನ್ನು ರಾಜ್‌ಕೋಟ್ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.