2026-06-06 12:52:53

ಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಗಲಿದೆ; ಲಕ್ಷ್ಮೀ ಹೆಬ್ಬಾಳ್ಕರ್ ವಿಶ್ವಾಸ|Speed News Kannada

ಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಗಲಿದೆ; ಲಕ್ಷ್ಮೀ ಹೆಬ್ಬಾಳ್ಕರ್ ವಿಶ್ವಾಸ|Speed News Kannada

 

ಬೆಂಗಳೂರು: ಎರಡನೇ ಹಂತದ ಸಂಪುಟ ವಿಸ್ತರಣೆಯಲ್ಲಿ ಮಹಿಳೆಗೆ ಸಚಿವ ಸ್ಥಾನ ಸಿಗಲಿದೆ ಎಂಬ ವಿಶ್ವಾಸ ಇದೆ. ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧಳಾಗಿರುತ್ತೇನೆ ಎಂದು ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರದಲ್ಲಿ ಯಾವುದೇ ಗೊಂದಲಗಳಿಲ್ಲ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಿರಿಯರು ಮತ್ತು ಸಮರ್ಥರಿದ್ದಾರೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರ ನಡೆಸಲಿದ್ದಾರೆ ಎಂದು ಹೇಳಿದರು.

ರಾಮಲಿಂಗಾರೆಡ್ಡಿ ರಾಜೀನಾಮೆ ಬಗ್ಗೆ ಕೇಳಿದ ಪ್ರಶ್ನೆಗೆ, ಪ್ರಜಾಪ್ರಭುತ್ವದಲ್ಲಿ ಅಭಿಪ್ರಾಯಗಳಿಗೆ ಬೆಲೆ ಇರುತ್ತದೆ. ಪಕ್ಷದ ಹಿರಿಯರು ಇದರ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂದರು.

ಬೆಳಗಾವಿ ರಾಜಕಾರಣ ನಿಮ್ಮ ಸಚಿವ ಸ್ಥಾನಕ್ಕೆ ಅಡ್ಡಿಯಾಗ್ತಿದೆಯಾ ಎಂಬ ಪ್ರಶ್ನೆಗೆ, ಖಂಡಿತವಾಗಿಯೂ ಅಂತಹದ್ದೇನೂ ಇಲ್ಲ. 2023ರಲ್ಲಿಯೇ ಆ ಕುರಿತು ಎಲ್ಲ ತೀರ್ಮಾನ ಆಗಿದೆ. ಎಲ್ಲ ಸಮಾಧಾನದಿಂದ ಮುಂದೆ ಹೋಗ್ತಾ ಇದ್ದೇವೆ. ಬೆಳಗಾವಿ ದೊಡ್ಡ ಜಿಲ್ಲೆಯಾಗಿದ್ದು ಇನ್ನೂ ಎರಡು ಸಚಿವ ಸ್ಥಾನ ನೀಡಬೇಕೆಂದು ಬೇಡಿಕೆ ಇಟ್ಟಿದ್ದೇವೆ. ಬೆಳಗಾವಿ  ಮೂರು ಜಿಲ್ಲೆಗಳಿಗೆ ಸಮನಾಗುವಷ್ಟು ದೊಡ್ಡದಿದೆ. ಹಾಗಾಗಿ ನಾವು ಹೆಚ್ಚುವರಿ ಸಚಿವ ಸ್ಥಾನ ಕೇಳಿದ್ದೇವೆ ಎಂದರು.‌

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.