2026-06-08 01:19:44

indefinite strike of transport empolyees begins from 20th may| ಇದೇ 20ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ |Speed News Kannada

indefinite strike of transport empolyees begins from 20th may| ಇದೇ 20ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ |Speed News Kannada

ದಾವಣಗೆರೆ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರಸ್ತೆ ಸಾರಿಗೆಯ ನಾಲ್ಕು ನಿಗಮಗಳ ನೌಕರರು ಮೇ 20ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರು ಮತ್ತು ಕಾರ್ಮಿಕರ ಒಕ್ಕೂಟದ ವಿಭಾಗೀಯ ಅಧ್ಯಕ್ಷ ಆವರಗೆರೆ ಎಚ್‌.ಜಿ. ಉಮೇಶ್‌ ಹೇಳಿದ್ದಾರೆ.

ಅವರು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ರಚಿಸಿ ವೇತನ ಹೆಚ್ಚಿಸಿದೆ. ಆದರೆ, ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಮಾಡಲು ಸರ್ಕಾರ ಆಸಕ್ತಿ ತೋರುತ್ತಿಲ್ಲ. ಸರ್ಕಾರ ಒಂದು ಕಣ್ಣಿಗೆ ಬೆಣ್ಣೆ, ಮತ್ತೊಂದು ಕಣ್ಣಿಗೆ ಸುಣ್ಣ ಎಂಬ ನೀತಿ ಅನುಸರಿಸುತ್ತಿದೆ. ಇಂತಹ ಏಕಪಕ್ಷೀಯ ನಿರ್ಧಾರವನ್ನು ವಿರೋಧಿಸಿ ಮುಷ್ಕರ ನಡೆಸಲು ತೀರ್ಮಾನಿಸಲಾಗಿದೆ. ಈ ನಿರ್ಧಾರದಿಂದ ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

2020ರಲ್ಲಿ ಬಾಕಿ ಉಳಿಸಿಕೊಂಡ ಹಲವು ತಿಂಗಳ ವೇತನವನ್ನು ಕೂಡಲೇ ಪಾವತಿಸಬೇಕು. ಒಂದೇ ಕಂತಿನಲ್ಲಿ ಹಿಂಬಾಕಿ ನೀಡಲು ಪ್ರಯತ್ನಿಸಬೇಕು. ತುಟ್ಟಿಭತ್ಯೆಯನ್ನು ಮೂಲವೇತನದಲ್ಲಿ ವಿಲೀನಗೊಳಿಸಿ ಹೊಸ ವೇತನಶ್ರೇಣಿ ರಚಿಸಬೇಕು ಇಲ್ಲವೇ ಬಸ್‌ ಸಂಚಾರ ಸಂಪೂರ್ಣ ಸ್ಥಗಿತಗೊಳಿಸಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಉಪಾಧ್ಯಕ್ಷ ಪ್ರಕಾಶ್, ಪ್ರಧಾನ ಕಾರ್ಯದರ್ಶಿ ಮಿರ್ಜಾ ರಹಮತ್ ಉಲ್ಲಾ, ಸಂಘಟನಾ ಕಾರ್ಯದರ್ಶಿ ಆನಂದ ನಾಯ್ಕ, ಈಶ್ವರ ಬಣವಿ, ದಿಳ್ಳೆಪ್ಪ ಕಾಂಬ್ಳೆ ಹಾಜರಿದ್ದರು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.