2026-03-07 01:02:17

India-US Relationship Growth | MP Basavaraja Bommai | ಭಾರತ- ಅಮೇರಿಕಾ ಸಂಬಂಧ ವೃದ್ದಿ ಮಹತ್ವದ ಮೈಲಿಗಲ್ಲು: ಸಂಸದ ಬಸವರಾಜ ಬೊಮ್ಮಾಯಿ | Speed News Kannada

India-US Relationship Growth | MP Basavaraja Bommai | ಭಾರತ- ಅಮೇರಿಕಾ ಸಂಬಂಧ ವೃದ್ದಿ ಮಹತ್ವದ ಮೈಲಿಗಲ್ಲು: ಸಂಸದ ಬಸವರಾಜ ಬೊಮ್ಮಾಯಿ | Speed News Kannada

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೇರಿಕಾ ಅಧ್ಯಕ್ಷ್ಯ ಡೊನಾಲ್ಡ್ ಟ್ರಂಪ್ ನಡುವೆ ನಡೆದ ಎರಡು ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರಗಳ ಒಪ್ಪಂದ ಉಭಯ ದೇಶಗಳ ನಡುವೆ ಸಹಕಾರ ಸಂಬಂಧ ವೃದ್ದಿಗೆ ಮಹತ್ವದ ಮೈಲುಗಲ್ಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಮಾಹಿತಿ ನೀಡಿರುವ ಅವರು, ಪ್ರಧಾನಿ ಮೋದಿಯವರ ಸದೃಢ ನಾಯಕತ್ವ ವಿಶ್ವಮಟ್ಟದಲ್ಲಿ ಭಾರತದ ರಾಷ್ಟ್ರೀಯ ಹಿತಾಸಕ್ತಿ ಕಾಪಾಡುವಲ್ಲಿ ಯಶಸ್ವಿಯಾಗಿದೆ. ಅವರ ಸಾಮರ್ಥ್ಯವನ್ನು ಬಳಸಿಕೊಂಡು ವಿಶ್ವ ಮಟ್ಟದಲ್ಲಿ ಭಾರತದ ಅಭಿವೃದ್ದಿಗೆ ಪೂರಕವಾಗಿ ಅವಕಾಶಗಳನ್ನು ಬಳಸಿಕೊಳ್ಳುವಲ್ಲಿ ಪ್ರಧಾನಿಯವರು ಯಶಸ್ವಿಯಾಗಿದ್ದಾರೆ. ಈ ಮಹತ್ವದ ಸಾಧನೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವವರ ನಾಯಕತ್ವಕ್ಕೆ ಮತ್ತು ಅವರ ತಂಡಕ್ಕೆ ಹೃತ್ಪೂರ್ವಕ  ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ. 
ಎರಡು ರಾಷ್ಟ್ರಗಳ ನಡುವಿನ ಈ ಒಪ್ಪಂದ ರೈತರು, ಸಣ್ಣ ಕೈಗಾರಿಕೆಗಳು, ನವೋದ್ಯಮಿಗಳಿಗೆ, ಕೌಶಲ್ಯ ಹೊಂದಿರುವ ಕಾರ್ಮಿಕರಿಗೆ ವಿಶ್ವ ಮಟ್ಟದಲ್ಲಿ ತಂತ್ರಜ್ಞಾನ, ಅಭಿವೃದ್ಧಿಯಲ್ಲಿ ಪಾಲ್ಗೊಳ್ಳಲು ಹೊಸ ಅವಕಾಶಗಳನ್ನು ಒದಗಿಸಲಿದೆ ಎಂದು ತಿಳಿಸಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.