2026-04-23 11:01:58

IndiGo flight makes emergency landing at Delhi airport | ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ | Speed news kannada

IndiGo flight makes emergency landing at Delhi airport | ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ | Speed news kannada

ಆಂಧ್ರಪ್ರದೇಶದ ವಿಶಾಖಪಟ್ಟಣಂನಿಂದ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನವೊಂದು ತುರ್ತು ಭೂಸ್ಪರ್ಶವಾಗಿದೆ. ಬೆಳಗ್ಗೆ 10:54ಕ್ಕೆ  ಆಂಧ್ರಪ್ರದೇಶದ ವಿಶಾಖಪಟ್ಟಣಂ ನಿಂದ ಬರುವಾಗ ಈ ಘಟನೆ ಸಂಭವಿಸಿದ್ದು, ಎಂಜಿಜಿನ್ ವೈಫಲ್ಯದ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನದಲ್ಲಿದ್ದ ಎಲ್ಲಾ 161 ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದು, ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ.

ಈ ವಿಮಾನವನ್ನು ಇಂಡಿಗೋ ಸಂಸ್ಥೆಯು ಟರ್ಕಿಯ ‘ಕೊರೆಂಡನ್ ಏರ್ಲೈನ್ಸ್’ನಿಂದ ಗುತ್ತಿಗೆ ಆಧಾರದ ಮೇಲೆ ಪಡೆದುಕೊಂಡಿತ್ತು. ಸದ್ಯ ವಿಮಾನವನ್ನು ತಪಾಸಣೆಗೆ ಒಳಪಡಿಸಲಾಗಿದೆ. ಪ್ರಯಾಣಿಕರ ಸುರಕ್ಷತೆಯೇ ನಮ್ಮ ಮೊದಲ ಆದ್ಯತೆ ಎಂದು ಇಂಡಿಗೋ ತಿಳಿಸಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.