2026-03-07 05:02:19

Indo-US Trade Agreement | ಭಾರತ-ಅಮೆರಿಕ ವಾಣಿಜ್ಯ ಒಪ್ಪಂದ; ಪಾಕಿಸ್ತಾನ ಚೀನಾಕ್ಕಿಂತ ಭಾರತಕ್ಕೆ ಕಡಿಮೆ ಸುಂಕ; ಪ್ರಧಾನಿ ಮೋದಿ ಹರ್ಷ | Speed News Kannada

Indo-US Trade Agreement | ಭಾರತ-ಅಮೆರಿಕ ವಾಣಿಜ್ಯ ಒಪ್ಪಂದ; ಪಾಕಿಸ್ತಾನ ಚೀನಾಕ್ಕಿಂತ ಭಾರತಕ್ಕೆ ಕಡಿಮೆ ಸುಂಕ; ಪ್ರಧಾನಿ ಮೋದಿ ಹರ್ಷ | Speed News Kannada

ನವದೆಹಲಿ: ಭಾರತ ಮತ್ತು ಅಮೆರಿಕ ನಡುವಿನ ನೂತನ ವಾಣಿಜ್ಯ ಒಪ್ಪಂದದಿಂದ ಚೀನಾ ಬಾಂಗ್ಲಾದೇಶ ಮತ್ತು ಪಾಕಿಸ್ತಾನಕ್ಕಿಂತ ಬಾರತದ ಮೇಲಿನ ಅಮೆರಿಕ ಸುಂಕ ಕಡಿಮೆಯಾಗಿದೆ. ಭಾರತದ ನೆರೆಹೊರೆಯ ದೇಶಗಳಿಗೆ ಹೋಲಿಸಿದರೆ ಭಾರತ ಮೇಲುಗೈ ಸಾಧಿಸಿದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. 
ಈ ಒಪ್ಪಂದಗಳನ್ನು ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿ ಮಾತುಕತೆ ನಡೆಸಿ ಸಾಮಾಜಿಕ ಜಾಲತಾಣಗಳಲ್ಲಿ ಈ ಒಪ್ಪಂದವನ್ನು ಪ್ರಕಟಿಸಿದ್ದಾರೆ.
ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತೀಯ ವಸ್ತುಗಳ ಮೇಲಿನ ಆಮದು ಸುಂಕವನ್ನು ಶೇ.50 ರಿಂದ ಶೇ.18ಕ್ಕೆ ಇಳಿಸಲಾಗಿದೆ. ಇದಕ್ಕೆ ಬದಲಾಗಿ ಭಾರತ ದೇಶವು ರಷ್ಯಾದಿಂದ ತೈಲ ಖರೀದಿ ನಿಲ್ಲಿಸಿದೆ ಎಂದು ಹೇಳಿದ್ದಾರೆ. 
ಭವಿಷ್ಯದಲ್ಲಿ ಭಾರತವು ಅಮೆರಿಕದಿಂದ ತೈಲ ಖರೀದಿಸಲಿದೆ. ಅಗತ್ಯವಿದ್ದರೆ ವೆನೆಜುವೆಲಾದಿಂದಲೂ ತೈಲ ಖರೀದಿಸುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ. 
ಅಮೆರಿಕ ಜತೆಗಿನ ಒಪ್ಪಂದಗಳನ್ನು ಕುರಿತು ಹರ್ಷ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ, ಮೇಕ್ ಇನ್ ಇಂಡಿಯಾ ಉತ್ಪನ್ನಗಳ ಮೇಲಿನ ಸುಂಕ ಶೇ.18ಕ್ಕೆ ಇಳಿಕೆಯಾಗಿರುವುದು ಸಂತೋಷವನ್ನುಂಟು ಮಾಡಿದೆ. ಅಮೆರಿಕ ಅಧ್ಯಕ್ಷ ಟ್ರಂಪ್ ಅವರೊಂದಿಗೆ ಮಾತನಾಡಿದ್ದು ಅತ್ಯಂತ ಸಂತೋಷಕರ ವಿಷಯವಾಗಿದ್ದು, ದೇಶದ ಜನತೆಯ ಪರವಾಗಿ ಟ್ರಂಪ್ ಅವರಿಗೆ ಧನ್ಯವಾದಗಳನ್ನುತಿಳಿಸುವುದಾಗಿ ಹೇಳಿದ್ದಾರೆ.
ಭಾರತ-ಅಮೆರಿಕ ನಡುವಿನ ನೂತನ ವ್ಯಾಪಾರ ಒಪ್ಪಂದದ ನಂತರ ಯುರೋಪಿಯನ್ ರಾಷ್ಟ್ರಗಳು ಹಾಗೂ ಜಪಾನ್, ದಕ್ಷಿಣ ಕೊರಿಯಾ ದೇಶಗಳಿಗೆ ಹೋಲಿಸಿದರೆ ಭಾರತದ ಮೇಲಿನ ಸುಂಕ ತುಸು ಹೆಚ್ಚು ಎಂದು ಹೇಳಲಾಗುತ್ತಿದೆ. ಆದರೆ ಚೀನಾ, ಪಾಕಿಸ್ತಾನ, ಇಂಡೋನೇಷ್ಯಾ, ಬಾಂಗ್ಲಾದೇಶ ಮತ್ತು ವಿಯೆಟ್ನಾಂ ಸೇರಿದಂತೆ ಏಷ್ಯಾ ದೇಶಗಳಿಗೆ ಹೋಲಿಸಿದರೆ ಭಾರತದ ಮೇಲಿನ ಅಮೆರಿಕ ಸುಂಕ ಕಡಿಮೆಯಾಗಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.