2026-06-08 01:25:11

Inspector Caught By Lokayukta | ಬೆಂಗಳೂರಲ್ಲಿ 4 ಲಕ್ಷ ಲಂಚ ಸ್ವೀಕರಿಸುವಾಗಲೇ ಇನ್ಸ್ ಪೆಕ್ಟರ್ ಲೋಕಾಯುಕ್ತ ಬಲೆಗೆ | Speed News Kannada

Inspector Caught By Lokayukta | ಬೆಂಗಳೂರಲ್ಲಿ 4 ಲಕ್ಷ ಲಂಚ ಸ್ವೀಕರಿಸುವಾಗಲೇ ಇನ್ಸ್ ಪೆಕ್ಟರ್ ಲೋಕಾಯುಕ್ತ ಬಲೆಗೆ | Speed News Kannada

ಬೆಂಗಳೂರು ನಗರದಲ್ಲಿ 4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಪೊಲೀಸ್ ಇನ್ಸ್ ಪೆಕ್ಟರ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅವರನ್ನು ವಶಕ್ಕೆ ಪಡೆದಿರುವಂತ ಲೋಕಾಯುಕ್ತ ಪೊಲೀಸರು, ವಿಚಾರಣೆ ನಡೆಸುತ್ತಿದ್ದಾರೆ.ಬೆಂಗಳೂರಿನ ಕೆ.ಪಿ ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಗೋವಿಂದರಾಜು 4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರ-ಚೀಟಿ ವ್ಯವಹಾರ ಕೇಸ್ ಸಂಬಂಧ ಲಂಚ ಪಡೆಯುವಾಗ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಕೆ.ಪಿ ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಗೋವಿಂದರಾಜು ವ್ಯಕ್ತಿಯೊಬ್ಬರನ್ನು ಚೀಟಿ ವ್ಯವಹಾರದ ಪ್ರಕರಣದಲ್ಲಿ ಸೇರಿಸುವುದಾಗಿ ಬೆದರಿಸಿ 4 ಲಕ್ಷಕ್ಕೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇಂದು ಹಣ ಪಡೆಯುತ್ತಿದ್ದಂತ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಅವರನ್ನು ಬಂಧಿಸಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.