2026-04-24 01:39:53

Intense search for Kerala girl in Chikkamagaluru | ಚಿಕ್ಕಮಗಳೂರಲ್ಲಿ ಕೇರಳ ಬಾಲಕಿಗಾಗಿ ತೀವ್ರ ಹುಡುಕಾಟ 30 ಗಂಟೆ ಕಳೆದರೂ ಸುಳಿವಿಲ್ಲ | Speed News Kannada

Intense search for Kerala girl in Chikkamagaluru | ಚಿಕ್ಕಮಗಳೂರಲ್ಲಿ ಕೇರಳ ಬಾಲಕಿಗಾಗಿ ತೀವ್ರ ಹುಡುಕಾಟ 30 ಗಂಟೆ ಕಳೆದರೂ ಸುಳಿವಿಲ್ಲ | Speed News Kannada

ಚಿಕ್ಕಮಗಳೂರು : ಚಿಕ್ಕಮಗಳೂರಿನ ದತ್ತಪೀಠ ಮಾಣಿಕ್ಯಾಧಾರ ಜಲಪಾತದ ಬಳಿ ಪ್ರವಾಸಕ್ಕೆ ಬಂದಿದ್ದ ವೇಳೆ ಮಿಸ್ ಆಗಿದ್ದ 15 ವರ್ಷದ ಬಾಲಕಿಗಾಗಿ ಹುಡುಕಾಟ ಮುಂದುವರಿದಿದೆ. ಕಳೆದ 30 ಗಂಟೆಕಾಲ ದಿಂದಲೂ ಶೋಧ ಕಾರ್ಯ ಮುಂದುವರಿದಿದ್ದು, ಈವರೆಗೂ ಯಾವುದೇ ಸುಳಿವು ಪತ್ತೆಯಾಗಿಲ್ಲ. ಹೀಗಾಗಿ ಪೋಷಕರಲ್ಲಿ ಆತಂಕ ಮನೆಮಾಡಿದೆ. ಕೇರಳದ ಪಾಲಕ್ಕಾಡ್ ಜಿಲ್ಲೆಯ ಶ್ರೀನಂದ (15) ನಾಪತ್ತೆಯಾಗಿರೋ ಬಾಲಕಿಯಾಗಿದ್ದಾಳೆ. ಶಾಲಾ ರಜೆ ಹಿನ್ನೆಲೆಯಲ್ಲಿ ಕುಟುಂಬದೊಂದಿಗೆ ಕರ್ನಾಟಕ ಪ್ರವಾಸಕ್ಕೆ ಬಂದಿದ್ದ ಈಕೆ ಚಿಕ್ಕಮಗಳೂರಿಗೆ ಬಂದಿದ್ದಳು ಎನ್ನಲಾಗಿದೆ.
ಏಪ್ರಿಲ್ 7 ರಂದು ಮಾಣಿಕ್ಯಾಧಾರ ಜಲಪಾತದ ಬಳಿ ಮೆಟ್ಟಿಲುಗಳನ್ನು ಇಳಿಯುತ್ತಿದ್ದಾಗ ಕುಟುಂಬದವರು ಮುಂದೆ ಹೋಗಿದ್ದರು. ಈ ವೇಳೆ ಹಿಂದಿದ್ದ ಬಾಲಕಿ ಕ್ಷಣಾರ್ಧದಲ್ಲಿ ಮಾಯವಾಗಿದ್ದಾಳೆ.ವಿಷಯ ತಿಳಿಯುತ್ತಿದ್ದಂತೆಯೇ ಅರಣ್ಯ ಇಲಾಖೆ ಪೊಲೀಸ್ ಮತ್ತು ಅಗ್ನಿಶಾಮಕ ದಳದ 30ಕ್ಕೂ ಹೆಚ್ಚು ಸಿಬ್ಬಂದಿ ಮಧ್ಯರಾತ್ರಿಯವರೆಗೆ ಹುಡುಕಾಟ ನಡೆಸಿದ್ದಾರೆ. ಏಪ್ರಿಲ್ 8 ರ ಮುಂಜಾನೆಯಿಂದ ಎಸ್.ಡಿ.ಆರ್.ಎಫ್ (SDRF) ತಂಡ ಕೂಡ ಕಾರ್ಯಾಚರಣೆಗೆ ಇಳಿದಿದ್ದು, ಸುಮಾರು 60ಕ್ಕೂ ಹೆಚ್ಚು ಸಿಬ್ಬಂದಿ 5 ತಂಡಗಳಾಗಿ ವಿಂಗಡಿಸಿಕೊಂಡು ಥರ್ಮಲ್ ಡೋನ್ ಬಳಸಿ ದಟ್ಟ ಕಾಡಿನಲ್ಲಿ ಹುಡುಕಾಟ ನಡೆಸುತ್ತಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.