2026-04-24 07:59:10

Internal reservation allocation final in Karnataka | ಕರ್ನಾಟಕದಲ್ಲಿ ಒಳಮೀಸಲಾತಿ ಹಂಚಿಕೆ ಫೈನಲ್‌, ಒಳಮೀಸಲಾತಿ 3 ಸೂತ್ರ ಫೈನಲ್‌ | Speed news kannada

Internal reservation allocation final in Karnataka | ಕರ್ನಾಟಕದಲ್ಲಿ ಒಳಮೀಸಲಾತಿ ಹಂಚಿಕೆ ಫೈನಲ್‌, ಒಳಮೀಸಲಾತಿ 3 ಸೂತ್ರ ಫೈನಲ್‌ | Speed news kannada

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಕುರಿತು ಸಿದ್ದರಾಮಯ್ಯ ಸರ್ಕಾರ ನಿರ್ಣಾಯಕ ತೀರ್ಮಾನ ಕೈಗೊಂಡಿದೆ. ಪರಿಶಿಷ್ಟ ಜಾತಿಗಳಿಗೆ ಲಭ್ಯವಿರುವ ಶೇ.15 ರಷ್ಟು ಮೀಸಲಾತಿಯಲ್ಲಿ ದಲಿತ ಎಡಗೈ 5.25, ಬಲಗೈ 5.25 ಮತ್ತು ಇತರರಿಗೆ 4.5ರಷ್ಟು ಹಂಚಿಕೆಗೆ ನಿರ್ಧರಿಸಲಾಗಿದೆ. ಇದರೊಂದಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸುವ ಕ್ರಾಂತಿಕಾರಿ ನಿರ್ಣಯ ಕೈಗೊಂಡಿದೆ. ವಿಶೇಷ ಸಚಿವ ಸಂಪುಟ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಂತಿಮವಾಗಿ ನಾವು ಸಂಪುಟದಲ್ಲಿ ಒಂದು ನಿರ್ಧಾರ ಕೈಗೊಂಡಿದ್ದೇವೆ. ಪ್ರವರ್ಗ ಎ-5.25, ಬಿ-5.25, ಸಿ-4.5 ಎಂದು ನಿರ್ಧಾರ ಮಾಡಿದ್ದು,ವಿಶೇಷ ಸಂಪುಟ ಸಭೆಯಲ್ಲಿ ಸರ್ವಾನುಮತದಿಂದ ಒಪ್ಪಿಕೊಳ್ಳಲಾಗಿದೆ. ಯಾವುದೇ ಅಪಸ್ವರ ಇಲ್ಲದೆಯೇ ಸಂಪುಟದಲ್ಲಿ ಒಪ್ಪಿಕೊಳ್ಳಲಾಗಿದೆ. ನ್ಯಾಯಾಲಯದ ಮುಂದಿನ ಆದೇಶದವರೆಗೆ ಇದೇ ಅನುಪಾತ ಅನ್ವಯವಾಗಲಿದ್ದು, ನೇಮಕಾತಿ ವೇಳೆ ಪ್ರವರ್ಗ ಎ-5.25, ಬಿ-5.25, ಸಿ-4.5 ಮೀಸಲಾತಿಯೊಂದಿಗೆ ಅಧಿಸೂಚನೆಯನ್ನು ಮತ್ತೊಮ್ಮೆ ಪ್ರಕಟ ಮಾಡುತ್ತೇವೆ. ಬಜೆಟ್​ನಲ್ಲಿ 56,432 ಹುದ್ದೆಗಳ ಭರ್ತಿ ಮಾಡುವುದಾಗಿ ಘೋಷಿಸಿದ್ದೇವೆ. ಈ 56,432 ಹುದ್ದೆಗಳ ಭರ್ತಿ ವೇಳೆ ಇದೇ ಮೀಸಲಾತಿ ಅನುಪಾತ ಅನ್ವಯವಾಗಲಿದೆ. ವಿಶೇಷ ಸಂಪುಟ ಸಭೆಯಲ್ಲಿ ನಿರ್ಧರಿಸಿದ ಅನುಪಾತ ಮುಂದುವರಿಯಲಿದೆ ಎಂದು ಮಾಹಿತಿ ಎಂದು ಸ್ಪಷ್ಟಪಡಿಸಿದರು. ಒಳಮೀಸಲಾತಿ ಪ್ರಮಾಣ 6, 6, 5 ಎಂದು ವರ್ಗೀಕರಣ ಮಾಡಿದ್ದೆವು. ನಂತರ ರೋಸ್ಟರ್ ಬಿಂದುವಿನಲ್ಲಿ ಗೊಂದಲ ಉಂಟಾಯಿತು. ನಂತರ ಅಲೆಮಾರಿ ಸಮುದಾಯ ನ್ಯಾಯಾಲಯದ ಮೊರೆ ಹೋದರು. ಮೀಸಲಾತಿ ಪ್ರಮಾಣ 50% ಮೀರಬಾರದೆಂದು ಕೋರ್ಟ್ ಆದೇಶಿಸಿತು. ಇಂದ್ರಾ ಸಹಾನಿ ಕೇಸ್​ನಲ್ಲಿ ಮೀಸಲಾತಿ ಪ್ರಮಾಣ 50% ಆದೇಶವಿತ್ತು. SC ಮೀಸಲಾತಿ ಪ್ರಮಾಣ 17% ಅನ್ವಯ. ನಾವು ಪ್ರವರ್ಗ ಎ-6, ಬಿ-6, ಸಿ-5 ಎಂದು ವರ್ಗೀಕರಣ ಮಾಡಿದ್ದೆವು. ಆದರೆ ಕೋರ್ಟ್ ಮೀಸಲಾತಿ ಪ್ರಮಾಣ 50% ಮೀರುವಂತಿಲ್ಲ ಎಂದಿದೆ. ಏ.16ರ ಕ್ಯಾಬಿನೆಟ್​ನಲ್ಲಿ ಒಳಮೀಸಲಾತಿ ವಿಚಾರ ಚರ್ಚೆಗೆ ಬಂದಿತ್ತು. ಒಳಮೀಸಲಾತಿ ವಿಚಾರವಾಗಿ ವಿಶೇಷ ಸಂಪುಟ ಸಭೆಗೆ ನಿರ್ಧರಿಸಿದೆವು ಎಂದರು

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.