2026-04-24 12:17:52

IPL black ticket scam by KSCA member | KSCA ಸದಸ್ಯನಿಂದಲೇ IPL ಬ್ಲಾಕ್ ಟಿಕೆಟ್ ದಂಧೆ | Speed news kannada

IPL black ticket scam by KSCA member | KSCA ಸದಸ್ಯನಿಂದಲೇ IPL ಬ್ಲಾಕ್ ಟಿಕೆಟ್ ದಂಧೆ | Speed news kannada

ಬೆಂಗಳೂರುದ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಟಿಕೆಟ್‌ಗಳನ್ನು ಕಾಳಬಜಾರಿನಲ್ಲಿ ಮಾರಾಟ ಮಾಡುತ್ತಿದ್ದ ದೊಡ್ಡ ಜಾಲವನ್ನು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಐಪಿಎಲ್‌ ಟಿಕೆಟ್‌ ಮಾರಾಟ ಮಾಡುತ್ತಿದ್ದ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯ KSCA ಸದಸ್ಯನನ್ನು ಪೊಲೀಸರು ಬಂಧಿಸಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂ ಹೋಟೆಲ್‌ ಕ್ಯಾಪ್ಟನ್‌ ಜೊತೆ ಸೇರಿ ಈ ಕೃತ್ಯ ಎಸೆಗುತ್ತಿದ್ದರು ಎಂಬುದು ವಿಚಾರಣೆ ಬಳಿಕ ಬಯಲಾಗಿದೆ. ಸಿಸಿಬಿ ಡಿಸಿಪಿ ಹರಿಬಾಬು ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಲಕ್ಷ್ಮೀ ಕ್ಯಾಟರ್ಸ್ ಹೋಟೆಲ್‌ನ ಕ್ಯಾಪ್ಟನ್ ಚಂದ್ರಶೇಖರ್ ಎಂಬಾತ ಸಿಕ್ಕಿಬಿದ್ದಿದ್ದಾನೆ. 15 ಸಾವಿರ ರೂಪಾಯಿ ಬೆಲೆಯ ಟಿಕೆಟ್‌ಗಳನ್ನು ಈತ ಬರೋಬ್ಬರಿ 19 ಸಾವಿರ ರೂಪಾಯಿಗೆ ಮಾರಾಟ ಮಾಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿ ಸೆರೆಹಿಡಿದಿದ್ದಾರೆ. ವಿಚಾರಣೆ ವೇಳೆ ಈತ ನೀಡಿದ ಮಾಹಿತಿ ಆಘಾತಕಾರಿಯಾಗಿದ್ದು, ಕೆಎಸ್​​ಸಿಎ ಸದಸ್ಯ ಗಣೇಶ್ ಹರಿಕೇಶ್ ಎಂಬುವವರ ಹೆಸರನ್ನು ಬಾಯ್ಬಿಟ್ಟಿದ್ದಾನೆ. ಆರ್‌ಸಿಬಿಯ ಮೊದಲ ಪಂದ್ಯದಲ್ಲಿ ಇವರು 81 ಟಿಕೆಟ್‌ಗಳನ್ನು ಮಾರಾಟ ಮಾಡಿದ್ದರು. ಕಳೆದ ಪಂದ್ಯಕ್ಕೆ 100 ಟಿಕೆಟ್‌ಗಳನ್ನು ಸಿದ್ಧಪಡಿಸಿಕೊಂಡಿದ್ದರು. ಒಟ್ಟಾರೆಯಾಗಿ 17 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ 181 ಟಿಕೆಟ್‌ಗಳನ್ನು ಖರೀದಿಸಿದ್ದು, ಅವುಗಳ ಪೈಕಿ 100 ಟಿಕೆಟ್​ಗಳನ್ನು ಬ್ಲಾಕ್​ನಲ್ಲಿ ಮಾರಾಟ ಮಾಡಿರುವುದು ಪತ್ತೆಯಾಗಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.