2026-05-06 05:17:23

ipl final match shifted to ahamadabad from bengaluru| | Speed News Kannada

ipl final match shifted to ahamadabad from bengaluru| | Speed News Kannada

ಬೆಂಗಳೂರು: ಟಾಟಾ ಐಪಿಎಲ್-2026ರ ಪ್ಲೇ ಆಫ್ ಪಂದ್ಯಗಳ ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಇಂದು  ಪ್ರಕಟಿಸಿದೆ. ಮೂಲ ವೇಳಾಪಟ್ಟಿಯ ಪ್ರಕಾರ ಐಪಿಎಲ್ ಫೈನಲ್ ಪಂದ್ಯ ಬೆಂಗಳೂರಿನಲ್ಲಿ ನಡೆಯಬೇಕಿತ್ತು. ಆದರೆ, ಸ್ಥಳೀಯ ಸಂಸ್ಥೆಗಳು, ಕೆಲವು ತಾಂತ್ರಿಕ ಕಾರಣಗಳು ಮತ್ತು ಬಿಸಿಸಿಐನ ಮಾರ್ಗಸೂಚಿಗಳಿಗೆ ಅನುಗುಣವಾಗಿ ಅನಿವಾರ್ಯವಾಗಿ ಅಂತಿಮ ಪಂದ್ಯವನ್ನು ಬೆಂಗಳೂರಿನಿಂದ ಅಹಮದಾಬಾದ್‌ಗೆ ಸ್ಥಳಾಂತರಿಸಲಾಗಿದೆ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ.

ಮೇ 31ರಂದು ಅಹಮದಾಬಾದ್‌ನ ವಿಶ್ವದ ಅತಿದೊಡ್ಡ ಕ್ರಿಕೆಟ್ ಮೈದಾನವಾದ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಇದರಿಂದ ಬೆಂಗಳೂರಿನ ಲಕ್ಷಾಂತರ ಕ್ರಿಕೆಟ್‌ ಅಭಿಮಾನಿಗಳಿಗೆ ನಿರಾಶೆಯಾಗಿದೆ.

ಈ ಬಾರಿಯ ಟೂರ್ನಿಯ ಅಂತಿಮ ಹಂತದ ಹೋರಾಟಕ್ಕೆ ಕ್ಷಣಗಣನೆ ಆರಂಭವಾಗಿದೆ. ಒಟ್ಟು 70 ರೋಚಕ ಲೀಗ್ ಹಂತದ ಪಂದ್ಯಗಳ ನಂತರ ಟೂರ್ನಿಯು ಈಗ ನಿರ್ಣಾಯಕ ಘಟ್ಟ ತಲುಪಿದೆ.

ಮೇ 26ರಂದು ಧರ್ಮಶಾಲಾದ ಹೆಚ್‌ಪಿಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಅಗ್ರ ಎರಡು ತಂಡಗಳು ಮುಖಾಮುಖಿಯಾಗಲಿದ್ದು, ಇಲ್ಲಿ ಗೆದ್ದ ತಂಡವು ನೇರವಾಗಿ ಫೈನಲ್ ಪ್ರವೇಶಿಸಲಿದೆ.

ಪಂದ್ಯಗಳ ವಿವರ ಮತ್ತು ಸ್ಥಳ:

ಕ್ವಾಲಿಫೈಯರ್ 1: ಅಗ್ರ ಎರಡು ತಂಡಗಳ ನಡುವಿನ ಈ ಪಂದ್ಯವು ಮೇ 26ರಂದು ಧರ್ಮಶಾಲಾದ ಹೆಚ್‌ಪಿಸಿಎ (HPCA) ಸ್ಟೇಡಿಯಂನಲ್ಲಿ ನಡೆಯಲಿದೆ. ಎಲಿಮಿನೇಟರ್: ಮೂರು ಮತ್ತು ನಾಲ್ಕನೇ ಸ್ಥಾನ ಪಡೆದ ತಂಡಗಳ ನಡುವಿನ ಹಣಾಹಣಿ ಮೇ 27ರಂದು ಚಂಡೀಗಢದ ಹೊಸ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಜರುಗಲಿದೆ. ಕ್ವಾಲಿಫೈಯರ್ 2: ಮೇ 29ರಂದು ಚಂಡೀಗಢದ ಅದೇ ಮೈದಾನದಲ್ಲಿ ಫೈನಲ್ ಪ್ರವೇಶಿಸುವ ಎರಡನೇ ತಂಡವನ್ನು ನಿರ್ಧರಿಸಲು ಈ ಪಂದ್ಯ ನಡೆಯಲಿದೆ.

ಫಿನಾಲೆ: ಮೇ 31ರಂದು ಅಹಮದಾಬಾದ್‌ನ ವಿಶ್ವದ ಅತಿದೊಡ್ಡ ಕ್ರಿಕೆಟ್ ಮೈದಾನವಾದ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಜಗತ್ತೇ ಎದುರು ನೋಡುತ್ತಿರುವ ಐಪಿಎಲ್ ಫೈನಲ್ ಪಂದ್ಯ ನಡೆಯಲಿದೆ.

 

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.