2026-06-08 03:32:33

Iran attacks Indian ships, four Indian sailors killed | ಭಾರತೀಯ ಹಡಗುಗಳ ಮೇಲೆ ಇರಾನ್ ದಾಳಿ, ಭಾರತದ ನಾಲ್ವರು ನಾವಿಕರು ಬಲಿ | Speed news kannada

Iran attacks Indian ships, four Indian sailors killed | ಭಾರತೀಯ ಹಡಗುಗಳ ಮೇಲೆ ಇರಾನ್ ದಾಳಿ, ಭಾರತದ ನಾಲ್ವರು ನಾವಿಕರು ಬಲಿ | Speed news kannada

ಹೊರ್ಮುಜ್ ಜಲಸಂಧಿಯಲ್ಲಿ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಭಾರತದ ಎರಡು ಹಡಗುಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ನಾಲ್ವರು ಭಾರತೀಯ ನಾವಿಕರು ಬಲಿಯಾಗಿದ್ದು, ಓರ್ವ ನಾವಿಕ ನಾಪತ್ತೆಯಾಗಿದ್ದಾರೆ ಎಂದು ಭಾರತದ ವಿದೇಶಾಂಗ ಇಲಾಖೆ ಅಧಿಕೃತ ಮಾಹಿತಿ ನೀಡಿದೆ. ಈ ಬಗ್ಗೆ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ತ್ರಿ ಕಳವಳ ವ್ಯಕ್ತಪಡಿಸಿದ್ದಾರೆ.

ಈ ದಾಳಿ ಭಾರತದ ‘ಜಾಗರ್ನವ್’ ಮತ್ತು ‘ಸನ್ಮಾರ್ ಹೆರಾಲ್ಡ್’ ಹಡಗುಗಳ  ಮೇಲೆ ನಡೆದಿತ್ತು. ಇರಾನ್‌ ಹೊರ್ಮುಜ್‌ ಅತಿಕ್ರಮವಾಗಿ ಪ್ರವೇಶಿಸುವುದರ ಕುರಿತು ಭಾರತದ ಎರಡು ಹಡಗುಗಳ ಮೇಲೆ ಇರಾನ್‌ ದಾಳಿ ನಡೆಸಿತ್ತು. ಅಮೆರಿಕಾ ಮತ್ತು ಇರಾನ್ ನಡುವೆ ಕದನ ವಿರಾಮ ಘೋಷಣೆಯಾಗಿ ಹೊರ್ಮುಜ್ ಜಲಸಂಧಿಯನ್ನು ವಾಣಿಜ್ಯ ಹಡಗುಗಳಿಗೆ ತೆರೆಯಲಾಗುವುದು ಎಂದು ಇರಾನ್ ಘೋಷಿಸಿದ ಕೆಲವೇ ಗಂಟೆಗಳಲ್ಲಿ ಈ ದಾಳಿ ನಡೆದಿದೆ. ಇರಾನ್‌ನ ವಿದೇಶಾಂಗ ಸಚಿವರೇ ಈ ಬಗ್ಗೆ ಹೇಳಿಕೆ ನೀಡಿದ್ದರೂ, ಭಾರತೀಯ ಧ್ವಜವಿದ್ದ ಹಡಗುಗಳ ಮೇಲೆ ದಾಳಿ ನಡೆದಿರುವುದು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಭಾರತ ಸರ್ಕಾರ ಇರಾನ್ ರಾಯಭಾರಿಯನ್ನು ಕರೆಸಿ ಪ್ರತಿಭಟನೆ ದಾಖಲಿಸಿದೆ ಹಾಗೂ ದಾಳಿಯ ಉದ್ದೇಶದ ಬಗ್ಗೆ ಉತ್ತರಿಸುವಂತೆ ಆಗ್ರಹಿಸಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.