2026-06-08 03:33:23

iran hit america bases in isreal, kuwait Speed News Kannada

iran hit america bases in isreal, kuwait  Speed News Kannada

ಟೆಹ್ರಾನ್: ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಪರಿಸ್ಥಿತಿ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದೆ. ಕುವೈತ್ ಹಾಗೂ ಇಸ್ರೇಲ್‌ ನಲ್ಲಿರುವ ಅಮೆರಿಕದ ನೆಲೆಗಳನ್ನು ಗುರಿಯಾಗಿಸಿಕೊಂಡು  ದೊಡ್ಡ ಮಟ್ಟದಲ್ಲಿ ಡ್ರೋನ್ ದಾಳಿ ನಡೆಸಿರುವುದಾಗಿ ಇರಾನ್‌ ಸೇನೆ ತಿಳಿಸಿದೆ.

ಯುಎಇಯಲ್ಲಿರುವ ಅಲ್-ಧಾಫ್ರಾ ವಾಯುನೆಲೆ, ಕುವೈತ್‌ ಹಾಗೂ ಇಸ್ರೇಲ್‌ನಲ್ಲಿರುವ ನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ. ಈ ದಾಳಿಯಲ್ಲಿ, ಅಮೆರಿಕದ ಭಯೋತ್ಪಾದಕರ ತರಬೇತಿ ಶಿಬಿರ, ಉಪಗ್ರಹ ಸಂವಹನ ಕೇಂದ್ರ, ಸೇರಿದಂತೆ ರಾಡಾರ್‌ ಗಳನ್ನು ಹೊಡೆದುರುಳಿಸಲಾಗಿದೆ ಎಂದು ಸೇನೆ ತಿಳಿಸಿದೆ.

ಫೆಬ್ರುವರಿ 28ರಂದು ಅಮೆರಿಕ ಮತ್ತು ಇಸ್ರೇಲ್‌ ನಡೆಸಿದ ಜಂಟಿ ದಾಳಿಯಲ್ಲಿ ಇರಾನ್‌ ಸಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರನ್ನು ಹತ್ಯೆ ಮಾಡಲಾಗಿತ್ತು. ಆ ಬಳಿಕ ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಭೀತಿ ಆವರಿಸಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.