2026-04-23 07:39:43

Iran missile attack on Oracle office in Dubai|ದುಬೈನ ಒರಾಕಲ್ ಕಚೇರಿ ಮೇಲೆ ಇರಾನ್ ಕ್ಷಿಪಣಿ ದಾಳಿ|Speed News Kannada

Iran missile attack on Oracle office in Dubai|ದುಬೈನ ಒರಾಕಲ್ ಕಚೇರಿ ಮೇಲೆ ಇರಾನ್ ಕ್ಷಿಪಣಿ ದಾಳಿ|Speed News Kannada

ಅಂತರರಾಷ್ಟ್ರೀಯ ಮಟ್ಟದಲ್ಲಿ ಸಂಚಲನ ಮೂಡಿಸಿರುವ ಘಟನೆಯೊಂದರಲ್ಲಿ, ಇರಾನ್ ಈಗ ಅಮೆರಿಕದ ಐಟಿ ದೈತ್ಯ 'ಒರಾಕಲ್' ಕಂಪನಿಯ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ದುಬೈ ಇಂಟರ್ನೆಟ್ ಸಿಟಿಯಲ್ಲಿರುವ ಒರಾಕಲ್ ಕಚೇರಿಯ ಮುಂಭಾಗಕ್ಕೆ ಇರಾನ್‌ನ ಕ್ಷಿಪಣಿಗಳು ಅಪ್ಪಳಿಸಿದ್ದು, ದಾಳಿಯನ್ನು ದುಬೈ ಅಧಿಕಾರಿಗಳು ಅಧಿಕೃತವಾಗಿ ದೃಢಪಡಿಸಿದ್ದಾರೆ.ಅಮೆರಿಕದ ಮಿತ್ರ ರಾಷ್ಟ್ರವಾಗಿರುವ ಯುಎಇ ಮೇಲೆ ಇರಾನ್ ಈ ವೈಮಾನಿಕ ದಾಳಿ ನಡೆಸಿದೆ. ಒರಾಕಲ್ ಕಚೇರಿಯ ಮುಂಭಾಗದ ಕಟ್ಟಡದ ಅವಶೇಷಗಳು ಪತ್ತೆಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಇತ್ತೀಚೆಗಷ್ಟೇ ಒರಾಕಲ್ ಸಂಸ್ಥೆ ಭಾರತದ 12,000 ಮಂದಿ ಸೇರಿದಂತೆ ವಿಶ್ವಾದ್ಯಂತ ಸುಮಾರು 30,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಿತ್ತು. ಉದ್ಯೋಗಿಗಳ ವಜಾ ಪ್ರಕ್ರಿಯೆ ನಡೆಯುತ್ತಿರುವಾಗಲೇ ಈ ದಾಳಿ ನಡೆದಿದೆ.ಕೆಲಸ ಕಳೆದುಕೊಂಡ ಉದ್ಯೋಗಿಗಳಿಗೆ ಕಂಪನಿಯು ಇಮೇಲ್ ಮೂಲಕ ಮಾಹಿತಿ ನೀಡಿದ್ದು, 15 ದಿನಗಳ ಬೋನಸ್ ಹಾಗೂ ನೋಟಿಸ್ ಪಿರಿಯಡ್ ಸಂಬಳದಂತಹ ಸೌಲಭ್ಯಗಳನ್ನು ಘೋಷಿಸಿದೆ. ಸ್ವಯಂಪ್ರೇರಿತವಾಗಿ ಹೊರಹೋಗುವವರಿಗೆ ಎರಡು ತಿಂಗಳ ಹೆಚ್ಚುವರಿ ಸಂಬಳ ನೀಡುವುದಾಗಿ ಕಂಪನಿ ತಿಳಿಸಿದೆ.

ಯುಎಇಯಲ್ಲಿ ಅಮೆರಿಕದ ಮಿಲಿಟರಿ ನೆಲೆ ಇರುವುದರಿಂದ, ಅಮೆರಿಕವನ್ನು ಗುರಿಯಾಗಿಸಿಕೊಂಡು ಇರಾನ್ ಈ ರೀತಿಯ ಡ್ರೋನ್ ಮತ್ತು ಕ್ಷಿಪಣಿ ದಾಳಿಗಳನ್ನು ನಡೆಸುತ್ತಿದೆ ಎಂದು ವಿಶ್ಲೇಷಿಸಲಾಗುತ್ತಿದೆ.ಕಂಪನಿಯ ಸಾಂಸ್ಥಿಕ ಬದಲಾವಣೆಗಳಿಂದಾಗಿ ಅನೇಕ ಉದ್ಯೋಗಿಗಳು ಬೀದಿಗೆ ಬಿದ್ದಿದ್ದಾರೆ. ಅಮೆರಿಕದಲ್ಲಿ ಕೆಲಸ ಮಾಡುತ್ತಿರುವ ಭಾರತೀಯ ಉದ್ಯೋಗಿಗಳು ಅಲ್ಲಿನ ಕಠಿಣ ಕಾರ್ಮಿಕ ಕಾನೂನುಗಳ ನಡುವೆಯೂ ವಜಾಗೊಳಿಸುವಿಕೆಯಿಂದ ಅತಿ ಹೆಚ್ಚು ಪ್ರಭಾವಿತರಾಗಿದ್ದಾರೆ ಎಂದು ಮಾಜಿ ಉದ್ಯೋಗಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.