2026-04-23 08:33:44

Iran says it has captured US pilot|ಯುಎಸ್ ಪೈಲಟ್ ಸೆರೆ ಹಿಡಿದಿರುವುದಾಗಿ ಇರಾನ್|Speed News Kannada

Iran says it has captured US pilot|ಯುಎಸ್ ಪೈಲಟ್ ಸೆರೆ ಹಿಡಿದಿರುವುದಾಗಿ ಇರಾನ್|Speed News Kannada

ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆ ಮತ್ತಷ್ಟು ತೀವ್ರಗೊಳ್ಳುತ್ತಿರುವ ಸೂಚನೆಗಳು ಕಂಡುಬಂದಿವೆ. ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಅಮೆರಿಕದ ಎಫ್-35 ಹಾಗೂ ಎಫ್-15ಇ ಯುದ್ಧ ವಿಮಾನಗಳನ್ನು ಹೊಡೆದುರುಳಿಸಲಾಗಿದೆ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ. ವರದಿಗಳ ಪ್ರಕಾರ, ದಾಳಿ ವೇಳೆ ಅಮೆರಿಕದ ಪೈಲಟ್ ಒಬ್ಬರು ಪ್ಯಾರಶೂಟ್ ಮೂಲಕ ಇಳಿದಿದ್ದು, ಅವರನ್ನು ಇರಾನ್ ಪಡೆಗಳು ಸೆರೆಹಿಡಿದಿವೆ ಎನ್ನಲಾಗಿದೆ. ಈ ಕುರಿತು ತಸ್ನಿಮ್ ಮತ್ತು ಇರಾನ್ ಇಂಟರ್ನ್ಯಾಷನಲ್ ಮಾಧ್ಯಮಗಳು ಮಾಹಿತಿ ನೀಡಿವೆ.

ಆದರೆ, ಈ ಸುದ್ದಿಯ ನಿಖರತೆ ಕುರಿತು ಇನ್ನೂ ಯಾವುದೇ ಅಧಿಕೃತ ದೃಢೀಕರಣ ಸಿಕ್ಕಿಲ್ಲ. ಅಮೆರಿಕದ ಯುಎಸ್ ಸೆಂಟ್ರಲ್ ಕಮಾಂಡ್, ಪೆಂಟಗನ್ ಹಾಗೂ ಶ್ವೇತಭವನ ಈ ವರದಿಗಳ ಬಗ್ಗೆ ಪ್ರತಿಕ್ರಿಯೆ ನೀಡಿಲ್ಲ.ಇದೇ ವೇಳೆ, ಇರಾನ್‌ನ ಕೆಲವು ಪ್ರದೇಶಗಳಲ್ಲಿ ಸ್ಥಳೀಯರು ಮತ್ತು ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಗಮನಾರ್ಹವಾಗಿ, ಎರಡು ವಾರಗಳ ಹಿಂದೆಯೂ ಇರಾನ್ ಅಮೆರಿಕದ ಅತ್ಯಾಧುನಿಕ ಎಫ್-35 ಯುದ್ಧ ವಿಮಾನವನ್ನು ಹೊಡೆದುರುಳಿಸಿದ್ದಾಗಿ ಹೇಳಿಕೊಂಡಿತ್ತು. ಈ ಬೆಳವಣಿಗೆಗಳು ಜಾಗತಿಕ ಮಟ್ಟದಲ್ಲಿ ಆತಂಕವನ್ನು ಹೆಚ್ಚಿಸಿವೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.