2026-04-23 11:00:51

Irans intelligence chief Majeed Khademi was assassinated|ಇರಾನ್‌ ಗುಪ್ತಚರ ಮುಖ್ಯಸ್ಥ ಮಜೀದ್ ಖಾದೇಮಿ ಹತ್ಯೆ|Speed News Kannada

Irans intelligence chief Majeed Khademi was assassinated|ಇರಾನ್‌ ಗುಪ್ತಚರ ಮುಖ್ಯಸ್ಥ ಮಜೀದ್ ಖಾದೇಮಿ ಹತ್ಯೆ|Speed News Kannada

ಅಮೆರಿಕ – ಇಸ್ರೇಲ್‌ ನಡೆಸಿದ ಜಂಟಿ ದಾಳಿಯಲ್ಲಿ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಗುಪ್ತಚರ ಮುಖ್ಯಸ್ಥ ಮಜೀದ್ ಖಾದೇಮಿ ಹತ್ಯೆಯಾಗಿದ್ದಾರೆ ಎಂದು ಐಆರ್‌ಜಿಸಿ ಅಧಿಕೃತವಾಗಿ ಹೇಳಿಕೊಂಡಿದೆ. ಆದ್ರೆ ಖಾದೇಮಿ ಸಾವನ್ನಪ್ಪಿದ್ದ ಸ್ಥಳದ ಬಗ್ಗೆ ಯಾವುದೇ ಸುಳಿವು ಬಿಟ್ಟುಕೊಟ್ಟಿಲ್ಲ. ಟೆಹ್ರಾನ್‌ ಸುತ್ತಮುತ್ತಲಿನ ಪ್ರದೇಶಗಳ ಮೇಲೆ ಅಮೆರಿಕ ಮತ್ತು ಇಸ್ರೇಲ್‌ ಸತತವಾಗಿ ವಾಯುದಾಳಿ ನಡೆಸುತ್ತಿವೆ. ಇದರಿಂದ ಘರ್ಷಣೆ ತೀವ್ರಸ್ವರೂಪ ಪಡೆದುಕೊಂಡಿರುವ ನಡುವೆ ಗುಪ್ತಚರ ಮುಖ್ಯಸ್ಥನ ಹತ್ಯೆಯಾಗಿದೆ. ಇಸ್ಲಾಮಿಕ್ ಕ್ರಾಂತಿಕಾರಿ ಗಾರ್ಡ್ ಕಾರ್ಪ್ಸ್ ಗುಪ್ತಚರ ಸಂಸ್ಥೆಯ ಮುಖ್ಯಸ್ಥರಾಗಿದ್ದ ಮೇಜರ್ ಜನರಲ್ ಮಜೀದ್ ಖಾದೇಮಿ ಇಂದು ಮುಂಜಾನೆ ಅಮೆರಿಕ-ಇದ್ರೇಲ್‌ ನಡೆಸಿದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾಗಿದ್ದಾರೆ ಎಂದು ಐಆರ್‌ಜಿಸಿ ತನ್ನ ಅಧಿಕೃತ ಟೆಲಿಗ್ರಾಮ್‌ ಚಾನೆಲ್‌ನಲ್ಲಿ ಮಾಹಿತಿ ಹಂಚಿಕೊಂಡಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.