2026-04-23 11:01:07

Israel, Lebanon declare 10-day ceasefire |ಇಸ್ರೇಲ್, ಲೆಬನಾನ್ ನಡುವೆ 10 ದಿನಗಳ ಕದನ ವಿರಾಮ ಘೋಷಣೆ | Speed news kannada

Israel, Lebanon declare 10-day ceasefire |ಇಸ್ರೇಲ್, ಲೆಬನಾನ್ ನಡುವೆ 10 ದಿನಗಳ ಕದನ ವಿರಾಮ ಘೋಷಣೆ | Speed news kannada

ಮಧ್ಯಪ್ರಾಚ್ಯದ ತೀವ್ರ ಸಂಘರ್ಷಕ್ಕೆ ಕಾರಣವಾಗಿದ್ದ ಇರಾನ್‌ ಮತ್ತು ಅಮೆರಿಕದ ಯುದ್ದವನ್ನು ತಡೆಯುವ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆಯನ್ನು ಕಂಡುಕೊಂಡಿದೆ. ಅಮೆರಿಕದ ಮಧ್ಯಸ್ಥಿಕೆಯಲ್ಲಿ ಇರಾನ್‌ ಮತ್ತು ಲೆಬನಾನ್‌ ನಡುವೆ 10 ದಿನಗಳ ಕದನ ವಿರಾಮಕ್ಕೆ ಸಹಮತ ವ್ಯಕ್ತವಾಗಿದೆ. ಈ ಮಧ್ಯೆ ಟ್ರಂಪ್‌ ಮತ್ತೆ ಬಡಾಯಿ ಕೊಚ್ಚಿಕೊಂಡಿದ್ದಾರೆ. ಇಸ್ರೇಲ್ ಮತ್ತು ಲೆಬನಾನ್ ನಡುವೆ ಐತಿಹಾಸಿಕ 10 ದಿನಗಳ ಯುದ್ಧ ವಿರಾಮವನ್ನು ಘೋಷಿಸಿ, ಇದು ತಾನು ನಿಲ್ಲಿಸಿದ 10ನೇ ಯುದ್ಧ ಎಂದು ಹೇಳಿದ್ದಾರೆ. “ಲೆಬನಾನ್‌ನ ಅತ್ಯಂತ ಗೌರವನೀಯ ಅಧ್ಯಕ್ಷ ಜೋಸೆಫ್ ಔನ್ ಮತ್ತು ಇಸ್ರೇಲ್‌ನ ಪ್ರಧಾನಮಂತ್ರಿ ಬಿಬಿ ನೆತನ್ಯಾಹು ಅವರೊಂದಿಗೆ ನಾನು ಅತ್ಯುತ್ತಮ ಮಾತುಕತೆ ನಡೆಸಿದ್ದೇನೆ. ತಮ್ಮ ದೇಶಗಳ ನಡುವೆ ಶಾಂತಿ ಸಾಧಿಸಲು, ಅವರು ಅಧಿಕೃತವಾಗಿ 10 ದಿನಗಳ ಯುದ್ಧ ವಿರಾಮವನ್ನು ಸಂಜೆ 5 ಗಂಟೆಗೆ (EST) ಆರಂಭಿಸಲು ಒಪ್ಪಿಕೊಂಡಿದ್ದಾರೆ,” ಎಂದು ಟ್ರಂಪ್ ಟ್ರೂತ್ ಸೋಶಿಯಲ್‌ನಲ್ಲಿ ಬರೆದಿದ್ದಾರೆ. ಅಮೆರಿಕ ಅಧ್ಯಕ್ಷ ಟ್ರಂಪ್‌ ಇದು ನನ್ನ 10ನೇ ಪ್ರಯತ್ನವಾಗಿದ್ದು, ಇದನ್ನೂ ಅಂತ್ಯಗೊಳಿಸಲು ಬದ್ಧನಾಗಿದ್ದೇನೆ ಎಂದು ಟ್ರಂಪ್ ಅವರು ಹೇಳಿದ್ದಾರೆ. ಒಂದು ಕಡೆ ಕದನ ವಿರಾಮದ ಮೂಲಕ ಶಾಂತಿ ಮಂತ್ರ ಪಠಿಸುವ ಟ್ರಂಪ್ ಮತ್ತೊಂದು ಕಡೆ ಇರಾನ್ ಮೇಲೆ ದಾಳಿ ಮಾಡುವ ಎಚ್ಚರಿಕೆಯನ್ನು ಟ್ರಂಪ್ ನೀಡಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.