2026-03-07 05:21:25

Israeli Airstrike on Lebanon border | ಲೆಬನಾನ್ ಗಡಿಯಲ್ಲಿ ಇಸ್ರೇಲ್ ನಿಂದ ವೈಮಾನಿಕ ದಾಳಿ ನಾಲ್ವರು ಬಲಿ ಉದ್ವಿಗ್ನತೆ ಹೆಚ್ಚಳ | Speed News Kannada

Israeli Airstrike on Lebanon border | ಲೆಬನಾನ್ ಗಡಿಯಲ್ಲಿ ಇಸ್ರೇಲ್ ನಿಂದ ವೈಮಾನಿಕ ದಾಳಿ ನಾಲ್ವರು ಬಲಿ ಉದ್ವಿಗ್ನತೆ ಹೆಚ್ಚಳ | Speed News Kannada

ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಸ್ರೇಲ್ ಸೇನೆ ಲೆಬನಾನ್-ಸಿರಿಯಾ ಗಡಿ ಭಾಗದಲ್ಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ ಘಟನೆ ನಡೆದಿದೆ.
ಲೆಬನಾನ್ ಅಧಿಕಾರಿಗಳು ನೀಡಿದ ಮಾಹಿತಿಯ ಪ್ರಕಾರ, ಕದನ ವಿರಾಮ ಜಾರಿಯಾದ ನಂತರ ನಡೆದ ಈ ದಾಳಿ ಪ್ರದೇಶದಲ್ಲಿ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.
ಮಜ್ಜಲ್ ಅಂಜ‌ರ್ ಪ್ರದೇಶದಲ್ಲಿ ಡೋನ್ ದಾಳಿ ನಡೆಸಿ ಕಾರೊಂದನ್ನು ಗುರಿಯಾಗಿಸಿಕೊಂಡಿದ್ದಾಗಿ ವರದಿಯಾಗಿದೆ.
ಮೃತಪಟ್ಟವರಲ್ಲಿ ಸಿರಿಯಾ ಮೂಲದ ಒಬ್ಬ ವ್ಯಕ್ತಿ ಸೇರಿರುವುದು ದೃಢಪಟ್ಟಿದೆ ಎಂದು ಸ್ಥಳೀಯ ಮಾಧ್ಯಮಗಳು ತಿಳಿಸಿವೆ. ಈ ದಾಳಿ ಕುರಿತು ಇಸ್ರೇಲ್ ಸೇನೆ ಸಾಮಾಜಿಕ ಜಾಲತಾಣದ ಮೂಲಕ ಪ್ರತಿಕ್ರಿಯಿಸಿ, ಪ್ಯಾಲೆಸ್ಟೀನಿಯನ್ ಇಸ್ಲಾಮಿಕ್ ಜಿಹಾದ್ ಸಂಘಟನೆಯ ಸದಸ್ಯರನ್ನು ಗುರಿಯಾಗಿಸಿಕೊಂಡು ಕಾರ್ಯಾಚರಣೆ ನಡೆಸಲಾಗಿದೆ ಎಂದು ಹೇಳಿಕೊಂಡಿದೆ.
ಇದನ್ನೂ ಓದಿ:
ನವೆಂಬರ್ 2024ರಲ್ಲಿ ಕದನ ವಿರಾಮ ಜಾರಿಯಾದ ಬಳಿಕ ಇಂತಹ ದಾಳಿ ನಡೆದಿರುವುದು ವಿಶೇಷ ಆದರೂ ಗಡಿ ಭಾಗಗಳಲ್ಲಿ ನಿಯತಕಾಲಿಕ ದಾಳಿಗಳು ಮುಂದುವರಿದಿವೆ ಎನ್ನಲಾಗುತ್ತಿದೆ. 2023 ಅಕ್ಟೋಬರ್ ನಂತರ ನಡೆದ ಸಂಘರ್ಷಗಳಲ್ಲಿ ಅನೇಕರು ಬಲಿಯಾಗಿದ್ದು, ಪರಿಸ್ಥಿತಿ ಇನ್ನೂ ಶಾಂತವಾಗಿಲ್ಲ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.