2026-04-24 01:38:38

IT employee dies amid wedding celebrations|ಮದುವೆ ಸಂಭ್ರಮದ ನಡುವೆ ಐಟಿ ಉದ್ಯೋಗಿ ದುರ್ಮರಣ|Speed News Kannada

IT employee dies amid wedding celebrations|ಮದುವೆ ಸಂಭ್ರಮದ ನಡುವೆ ಐಟಿ ಉದ್ಯೋಗಿ ದುರ್ಮರಣ|Speed News Kannada

ಚಿಕ್ಕಮಗಳೂರು ಜಿಲ್ಲೆಯಲ್ಲಿ ದುರ್ಘಟನೆ… ಭದ್ರಾ ನದಿಯಲ್ಲಿ ಈಜಲು ತೆರಳಿದ ಐಟಿ ಉದ್ಯೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.ಜಿಲ್ಲೆಯ ನರಸಿಂಹರಾಜಪುರ ತಾಲ್ಲೂಕಿನ ಬನ್ನೂರು ಗ್ರಾಮದ ಬಳಿ ಈ ಘಟನೆ ನಡೆದಿದೆ. ಮೃತ ಯುವಕನನ್ನು ಗದಗ ಮೂಲದ 27 ವರ್ಷದ ಅಭಿಷೇಕ್ ಎಂದು ಗುರುತಿಸಲಾಗಿದೆ. ಅವರು ಬೆಂಗಳೂರಿನ ಖಾಸಗಿ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.ಅಭಿಷೇಕ್ ತಮ್ಮ ಸ್ನೇಹಿತನ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಸ್ನೇಹಿತರೊಂದಿಗೆ ಚಿಕ್ಕಮಗಳೂರಿನ ಬಾಳೆಹೊನ್ನೂರು ಸಮೀಪದ ಬನ್ನೂರು ಗ್ರಾಮಕ್ಕೆ ಆಗಮಿಸಿದ್ದರು. ಸ್ಥಳೀಯ ಹೋಂ ಸ್ಟೇನಲ್ಲಿ ವಾಸ್ತವ್ಯ ಹೂಡಿದ್ದರು.

ಇಂದು ಬೆಳಗ್ಗೆ ಸ್ನೇಹಿತರೊಂದಿಗೆ ಭದ್ರಾ ನದಿಗೆ ಈಜಲು ತೆರಳಿದ ವೇಳೆ, ನೀರಿನ ಪ್ರಬಲ ಸೆಳೆತಕ್ಕೆ ಸಿಲುಕಿ ಅಭಿಷೇಕ್ ನಾಪತ್ತೆಯಾಗಿದ್ದರು.ಘಟನೆಯ ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಸ್ಥಳೀಯರು ಶೋಧ ಕಾರ್ಯಾಚರಣೆ ನಡೆಸಿದರು. ಹಲವು ಗಂಟೆಗಳ ಪರಿಶ್ರಮದ ನಂತರ, ಬನ್ನೂರು ಗ್ರಾಮದ ಸಮೀಪದಲ್ಲೇ ನದಿಯಲ್ಲಿ ಅಭಿಷೇಕ್ ಅವರ ಮೃತದೇಹ ಪತ್ತೆಯಾಗಿದೆ.ಮದುವೆ ಸಂಭ್ರಮದಲ್ಲಿ ಭಾಗವಹಿಸಲು ಬಂದಿದ್ದ ಸ್ನೇಹಿತರು ಈ ದುರ್ಘಟನೆಯಿಂದ ಶೋಕಸಾಗರದಲ್ಲಿ ಮುಳುಗಿದ್ದಾರೆ. ಈ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.