2026-03-07 06:26:33

Its time to put an end to freebies | ಉಚಿತ ಕೊಡುಗೆಗಳಿಗೆ ಕೊನೆ ಹಾಡುವ ಕಾಲ ಬಂದಿದೆ ಸುಪ್ರೀಂಕೋರ್ಟ್‌ | Speed News Kannada

Its time to put an end to freebies | ಉಚಿತ ಕೊಡುಗೆಗಳಿಗೆ ಕೊನೆ ಹಾಡುವ ಕಾಲ ಬಂದಿದೆ ಸುಪ್ರೀಂಕೋರ್ಟ್‌ | Speed News Kannada

ನವದೆಹಲಿ: ಚುನಾವಣೆಗಳ ಸಂದರ್ಭಗಳಲ್ಲಿ ಉಚಿತ ಕೊಡುಗೆಗಳನ್ನು ಘೋಷಿಸುವ ರಾಜ್ಯ ಸರ್ಕಾರಗಳನ್ನು ಸುಪ್ರೀಂಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ. ಉಚಿತ ಅಹಾರ ಮತ್ತು ಉಚಿತ ವಿದ್ಯುತ್‌ ಕೊಡುತ್ತಾ ಹೋದರೆ ರಾಜ್ಯದ ಅಭಿವೃದ್ಧಿಗೆ ಹಣವಾದರೂ ಎಲ್ಲಿ ಉಳಿಯುತ್ತದೆ ಎಂದು ಖಾರವಾಗಿ ಪ್ರಶ್ನಿಸಿದೆ.
ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ರಾಜ್ಯ ಸರ್ಕಾರ ಉಚಿತ ವಿದ್ಯುತ್‌ ಕೊಡಲು ನಿರ್ಧರಿಸಿದೆ. ಈ ನಿರ್ಧಾರವನ್ನು ಕಟುವಾಗಿ ಟೀಕಿಸಿರುವ ನ್ಯಾಯಾಲಯ ರಾಜ್ಯ ಸರ್ಕಾರ ವಿತ್ತೀಯ ಕೊರತೆ ಎದುರಿಸುತ್ತಿದೆ. ಹೀಗಾದರೆ ಅಭಿವೃದ್ಧಿಗೆ ಹಣ ಎಲ್ಲಿಂದ ತರುತ್ತೀರಿ ಎಂದೂ ಪ್ರಶ್ನಿಸಿದೆ.
ತಮಿಳುನಾಡು ವಿದ್ಯುತ್ ವಿತರಣಾ ನಿಗಮ ಲಿ.ನ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಸುಪ್ರೀಂ ಪೀಠ, ರಾಜ್ಯಗಳು ಬಡವರನ್ನು ಬೆಂಬಲಿಸುವುದರಲ್ಲಿ ಅರ್ಥವಿದೆ. ಆದರೆ ಶ್ರೀಮಂತ ಮತ್ತು ಬಡವರ ನಡುವೆ ವ್ಯತ್ಯಾಸವಿಲ್ಲದೆ ಎಲ್ಲರಿಗೂ ಉಚಿತವಾಗಿ ನೀಡುವುದು ತಪ್ಪು ಎಂದು ಹೇಳಿದೆ. ಆರ್ಥಿಕ ಅಭಿವೃದ್ಧಿಗೆ ಅಡ್ಡಿಯಾಗುವ ಇಂತಹ ನೀತಿಗಳನ್ನು ಪುನರ್ವಿಮರ್ಶಿಸುವ ಸಮಯ ಬಂದಿದೆ ಎಂದಿದೆ.
ಈ ರೀತಿಯ ದೊಡ್ಡ ದೊಡ್ಡ ಉಚಿತ ಕೊಡುಗೆಗಳಿಂದ ದೇಶದ ಆರ್ಥಿಕ ಅಭಿವೃದ್ಧಿಗೆ ಅಡ್ಡಿಯಾಗುತ್ತದೆ ಮತ್ತು ರಾಜ್ಯ ಸರ್ಕಾರಗಳು ಎಲ್ಲರಿಗೂ ಉಚಿತ ಆಹಾರ, ಸೈಕಲ್‌ಗಳು, ವಿದ್ಯುತ್ ನೀಡುವ ಬದಲು ಉದ್ಯೋಗ ಒದಗಿಸುವ ಮಾರ್ಗಗಳನ್ನು ಹುಡುಕಬೇಕು ಎಂದು ಪೀಠ ಸಲಹೆ ನೀಡಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.