2026-03-07 07:16:04

Jailbreak is the fate of Pavithra Gowda team | ಮನೆಯೂಟಕ್ಕೆ ಬ್ರೇಕ್ ನೀಡಿದ ಹೈಕೋರ್ಟ್ ಪವಿತ್ರಾಗೌಡ ಟೀಂಗೆ ಜೈಲೂಟವೇ ಗತಿ | Speed News kannada

Jailbreak is the fate of Pavithra Gowda team | ಮನೆಯೂಟಕ್ಕೆ ಬ್ರೇಕ್ ನೀಡಿದ ಹೈಕೋರ್ಟ್ ಪವಿತ್ರಾಗೌಡ ಟೀಂಗೆ ಜೈಲೂಟವೇ ಗತಿ | Speed News kannada

ಬೆಂಗಳೂರು:ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ-1 ಆರೋಪಿಯಾಗಿರುವ ಪವಿತ್ರಾ ಗೌಡ  ಮನೆ ಊಟ ಬೇಕೆಂದು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. 
ಮನೆಯೂಟ ಬೇಕೆಂಬ ಅರ್ಜಿ ವಿಚಾರಣೆ ನಡೆಸಿದ್ದ 57ನೇ ಸಿಸಿಎಚ್ ನ್ಯಾಯಾಲಯ ವಾರಕ್ಕೊಮ್ಮೆ ಅಥವಾ ವೈದ್ಯಕೀಯ ಕಾರಣಗಳಿದ್ದರೆ ಮನೆ ಊಟ ತರಿಸಿಕೊಳ್ಳಬಹುದು ಎಂದು ಆದೇಶ ನೀಡಿತ್ತು. ಆ ಪ್ರಕಾರ ಪ್ರಕರಣದ ಆರೋಪಿಗಳಾದ ಪವಿತ್ರಾ ಗೌಡ, ನಾಗರಾಜ್ ಮತ್ತು ಲಕ್ಷ್ಮಣ್ ಅವರಿಗೆ ಮನೆಯಿಂದ ಊಟ ಬರುತ್ತಿತ್ತು. ಸೆಷನ್ಸ್ ಕೋರ್ಟ್ ಆದೇಶ ಪ್ರಶ್ನಿಸಿ ಪ್ರಾಸಿಕ್ಯೂಷನ್ ಹೈಕೋರ್ಟ್ ಗೆ ಹೋಗಿದ್ದರು.
ಈ ವಿಶೇಷ ಸೇವೆಯನ್ನು ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್  ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠವು  ಸಿಸಿಹೆಚ್ ಕೋರ್ಟ್ ನೀಡಿದ್ದ ಆದೇಶ ರದ್ದುಪಡಿಸಿದೆ. ಅಲ್ಲದೆ, ‘ಆರೋಪಿ ಕೇಳಿದ ಕೂಡಲೇ ಮನೆ ಊಟ ಕೊಡಲು ಅನುಮತಿ ನೀಡಲು ಆಗುವುದಿಲ್ಲ. ವೈದ್ಯಕೀಯ ಸಲಹೆ ಇದ್ದರೆ ಮಾತ್ರ ಮನೆ ಊಟಕ್ಕೆ ಅವಕಾಶ ನೀಡಲಾಗುತ್ತಿದೆ ಎಂದು ತಿಳಿಸಿದೆ.
ವಿಚಾರಣಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ ಪವಿತ್ರಾ, ನಾಗರಾಜ್ ಮತ್ತು ಲಕ್ಷ್ಮಣ್ ಅವರು ಮನೆ ಊಟ ಮಾಡಲು ಅವಕಾಶ ಮಾಡಿಕೊಂಡಿದ್ದರು. ನಂತರ ಸಾಕಷ್ಟು ವಾದ-ವಿವಾದಗಳ ಬಳಿಕ ವಾರಕ್ಕೊಮ್ಮೆ ಮಾತ್ರ ತರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿತ್ತು. ಈ ನಿರ್ಧಾರಕ್ಕೆ  ಜೈಲು ಅಧಿಕಾರಿಗಳು ಆರಂಭದಿಂದಲೂ ವಿರೋಧ ವ್ಯಕ್ತಪಡಿಸುತ್ತಲೇ ಬಂದಿದ್ದರು. ಜೈಲಿನ ಆಹಾರ ಶುಚಿ, ರುಚಿ ಮತ್ತು ಆರೋಗ್ಯಕರವಾಗಿರುವಾಗ ಮನೆಯಿಂದ ಊಟ ನೀಡುವ ಔಚಿತ್ಯ ಏನಿದೆ? ಎಂದು ವಾದಿಸಿದ್ದರು. ಇಂದು ಪವಿತ್ರಾ ಮತ್ತು ಇತರೆ ಆರೋಪಿಗಳ ಮನೆ ಊಟಕ್ಕೆ ಸಂಪೂರ್ಣ ಬ್ರೇಕ್ ಬಿದ್ದಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.