2026-03-07 06:36:34

Janardhan Reddy Meets Nitin Nabin | ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ನಿತಿನ್ ನಬಿನ್ ರನ್ನು ಭೇಟಿಯಾದ ಜನಾರ್ದನ್ ರೆಡ್ಡಿ : ಪಕ್ಷ ಸಂಘಟನೆ ಕುರಿತು ಮಹತ್ವದ ಚರ್ಚೆ | Speed News Kannada

Janardhan Reddy Meets Nitin Nabin | ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ನಿತಿನ್ ನಬಿನ್ ರನ್ನು ಭೇಟಿಯಾದ ಜನಾರ್ದನ್ ರೆಡ್ಡಿ : ಪಕ್ಷ ಸಂಘಟನೆ ಕುರಿತು ಮಹತ್ವದ ಚರ್ಚೆ | Speed News Kannada

ನವದೆಹಲಿ: ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರಾದ ನಿತಿನ್ ನಬಿನ್ ಅವರನ್ನು ನವದೆಹಲಿಯಲ್ಲಿನ ಅವರ ನಿವಾಸದಲ್ಲಿ ಕುಟುಂಬ ಸಮೇತರಾಗಿ ಭೇಟಿ ಮಾಡಿ, ಕುಶಲೋಪರಿ ವಿಚಾರಿಸಿ ಸೌಹಾರ್ದಪೂರ್ಣ ಮಾತುಕತೆ ನಡೆಸಲಾಗಿದೆ.
ಈ ಭೇಟಿಯ ಸಂದರ್ಭದಲ್ಲಿ ಪಕ್ಷದ ಪ್ರಸ್ತುತ ಸ್ಥಿತಿ, ಭವಿಷ್ಯದ ಕಾರ್ಯತಂತ್ರಗಳು ಹಾಗೂ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ಕುರಿತು ಮಹತ್ವದ ವಿಚಾರ ವಿನಿಮಯ ನಡೆದಿದೆ. ಪಕ್ಷವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿಸ್ತೃತ ಚರ್ಚೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ವಿಶೇಷವಾಗಿ ಪಕ್ಷ ಸಂಘಟನೆ ಕುರಿತು ನಿತಿನ್ ನಬಿನ್ ಜಿ ಅವರು ಸ್ಪಷ್ಟ ಹಾಗೂ ಪ್ರೇರಣಾದಾಯಕ ಮಾರ್ಗದರ್ಶನ ನೀಡಿದರು. ಬೂತ್ ಮಟ್ಟದಿಂದ ರಾಷ್ಟ್ರೀಯ ಮಟ್ಟದವರೆಗೆ ಕಾರ್ಯಕರ್ತರನ್ನು ಪರಿಣಾಮಕಾರಿಯಾಗಿ ಸಂಘಟಿಸುವುದು, ಯುವಕರು ಮತ್ತು ಮಹಿಳೆಯರ ಸಕ್ರಿಯ ಭಾಗವಹಿಸುವಿಕೆ ಹೆಚ್ಚಿಸುವುದು, ಶಿಸ್ತಿನೊಂದಿಗೆ ಕೆಲಸ ಮಾಡುವ ಸಂಸ್ಕೃತಿಯನ್ನು ಬೆಳೆಸುವುದು ಹಾಗೂ ಜನಸಂಪರ್ಕವನ್ನು ಇನ್ನಷ್ಟು ಬಲಪಡಿಸುವ ಕುರಿತು ಅವರು ಅಮೂಲ್ಯ ಸಲಹೆಗಳನ್ನು ನೀಡಿದರು.

ಪಕ್ಷದ ತತ್ವ, ಮೌಲ್ಯಗಳು ಹಾಗೂ ಗುರಿಗಳನ್ನು ಮನೆಮನೆಗೂ ತಲುಪಿಸುವ ದೃಢ ಸಂಕಲ್ಪದೊಂದಿಗೆ ಕಾರ್ಯನಿರ್ವಹಿಸುವಂತೆ ಅವರು ಕರೆ ನೀಡಿದರು. ಈ ಭೇಟಿಯಿಂದ ಪಕ್ಷದ ಕಾರ್ಯಕರ್ತರಿಗೆ ಹೊಸ ಉತ್ಸಾಹ, ಸ್ಪಷ್ಟ ದಿಕ್ಕು ಹಾಗೂ ಪಕ್ಷವನ್ನು ಇನ್ನಷ್ಟು ಶಕ್ತಿಶಾಲಿಯಾಗಿ ಕಟ್ಟುವ ಆತ್ಮವಿಶ್ವಾಸ ದೊರೆತಿದೆ ಎಂದು ನಾಯಕರು ಅಭಿಪ್ರಾಯಪಟ್ಟರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.