ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಕೂಟದಲ್ಲಿ ಭಿನ್ನಾಭಿಪ್ರಾಯಗಳಿವೆ ಎಂಬ ವರದಿಗಳ ನಡುವೆಯೂ, ಜೆಡಿಎಸ್ ಪಕ್ಷವು ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಬೆಂಬಲವಾಗಿ ಪ್ರಚಾರ ನಡೆಸಲು ನಿರ್ಧರಿಸಿದೆ. ಈ ಸಂಬಂಧವಾಗಿ, ಕೇಂದ್ರ ಸಚಿವರಾದ ಎಚ್‌ಡಿ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಸುಮಾರು 40 ನಾಯಕರ ಪಟ್ಟಿಯನ್ನು ಜೆಡಿಎಸ್ ಬಿಡುಗಡೆ ಮಾಡಿದೆ.
ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಲಿರುವ ಪ್ರಮುಖ ನಾಯಕರಲ್ಲಿ ಶಾಸಕರಾದ ಎಚ್ ಡಿ ರೇವಣ್ಣ, ಸುರೇಶ್ ಬಾಬು ಸಿ ಬಿ, ಶರಣಗೌಡ ಕಂದಕೂರ್, ಶಾರದಾ ಪೂರ್ಯನಾಯ್ಕ್, ಕರೆಮ್ಮ ಜಿ ನಾಯಕ್, ಮಲ್ಲೇಶ್ ಬಾಬು ಎಂ ಹಾಗೂ ಎಂಎಲ್‌ಸಿಗಳಾದ ಎಸ್ ಎಲ್ ಭೋಜೆಗೌಡ ಮತ್ತು ಟಿ ಎ ಶರವಣ ಸೇರಿದ್ದಾರೆ. ಜೊತೆಗೆ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಕೂಡ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ದಾವಣಗೆರೆ ಮತ್ತು ಬಾಗಲಕೋಟೆ ಕ್ಷೇತ್ರಗಳಲ್ಲಿ ಜೆಡಿಎಸ್‌ಗೆ ಬಲವಾದ ರಾಜಕೀಯ ನೆಲೆ ಇಲ್ಲದಿದ್ದರೂ, ಬಿಜೆಪಿ ಅಭ್ಯರ್ಥಿಗಳಿಗೆ ಸ್ವಲ್ಪ ಮಟ್ಟಿಗೆ ಮತಗಳನ್ನು ಸೆಳೆಯುವ ಸಾಧ್ಯತೆ ಇದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.