2026-06-08 01:24:51

JDS sparks against DCM D.K. Shivakumar | ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ JDS ಕಿಡಿ | Speed news kannada

JDS sparks against DCM D.K. Shivakumar | ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ JDS ಕಿಡಿ | Speed news kannada

ಕುರ್ಚಿ ಆಸೆಗಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ತಮ್ಮ ವಿರೋಧಿ ಬಣದ ನಾಯಕರನ್ನು ಹೊಂಚು ಹಾಕಿ, ಸಂಚು ರೂಪಿಸಿ ಮುಗಿಸುತ್ತಿದ್ದಾರೆ ಎಂದು ಜೆಡಿಎಸ್ ಕಿಡಿಕಾರಿದೆ. ಕಾಂಗ್ರೆಸ್ ಪಕ್ಷದಲ್ಲಿ ಸಾಮಾಜಿಕ ಅನ್ಯಾಯ ನಡೆಯುತ್ತಿದೆ. ಅಂದು ಪರಿಶಿಷ್ಟ ಸಮುದಾಯದ ವಾಲ್ಮೀಕಿ ಜನಾಂಗದ ನಾಯಕ ಕೆ.ಎನ್. ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ಏಕಾಏಕಿ ಕಿತ್ತು ಹಾಕಿದ್ದರು. ಇಂದು ಅಲ್ಪಸಂಖ್ಯಾತ ಸಮುದಾಯದ ಮುಖಂಡ ಅಬ್ದುಲ್ ಜಬ್ಬರ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಜೆಡಿಎಸ್‌ ತನ್ನ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದೆ. ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ವಿಚಾರದಲ್ಲಿ ಎಲ್ಲವೂ ಸರಿಯಲ್ಲ. ಅಧ್ಯಕ್ಷರು ತಪ್ಪು ಮಾಡಿದರೆ ಕೇವಲ ಕ್ಷಮೆ ಕೇಳಿದರೆ ಸಾಕು, ಆದರೆ ಪರಿಶಿಷ್ಟ ಮತ್ತು ಅಲ್ಪಸಂಖ್ಯಾತ ನಾಯಕರಿಗೆ ಮಾತ್ರ ವಜಾ ಮತ್ತು ಉಚ್ಚಾಟನೆಯ ಶಿಕ್ಷೆ ನೀಡುತ್ತಾರೆ. ಕುರ್ಚಿ ಆಸೆಗಾಗಿ ಡಿಕೆ ಶಿವಕುಮಾರ್ ತಮ್ಮ ವಿರೋಧಿ ಬಣದ ನಾಯಕರನ್ನು ಹೊಂಚು ಹಾಕಿ, ಸಂಚು ರೂಪಿಸಿ ಒಬ್ಬೊಬ್ಬರನ್ನೇ ಮುಗಿಸುತ್ತಿದ್ದಾರೆ ಎಂದು ಆರೋಪಿಸಿದೆ. 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.