2026-03-07 07:01:54

Job fraud | ಉದ್ಯೋಗ ಕೊಡಿಸೋದಾಗಿ ವಂಚನೆ ಆರೋಪ ಇಬ್ಬರು ಕಾಂಗ್ರೆಸ್ ನಾಯಕರ ಉಚ್ಚಾಟನೆ | Speed News Kannada

Job fraud | ಉದ್ಯೋಗ ಕೊಡಿಸೋದಾಗಿ ವಂಚನೆ ಆರೋಪ ಇಬ್ಬರು ಕಾಂಗ್ರೆಸ್ ನಾಯಕರ ಉಚ್ಚಾಟನೆ | Speed News Kannada

ಶಿವಮೊಗ್ಗ : ಮಹಿಳೆಗೆ ಉದ್ಯೋಗದ ಭರವಸೆ ನೀಡಿ ಹಣ ಪಡೆದು ಮೋಸ ಮಾಡಿದ ಆರೋಪ ಗಂಭೀರ ತಿರುವು ಪಡೆದಿದೆ. 3 ಲಕ್ಷ ರೂ. ಹಣ ಪಡೆದು ವಂಚಿಸಿರುವ ಹಿನ್ನೆಲೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ನಾಜಿಮಾ ಹಾಗೂ ವೈ. ತಿಮ್ಮರಾಜು ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ. ಅಸ್ಮಾ ಬಾನು ಎಂಬ ಮಹಿಳೆಗೆ ಗುತ್ತಿಗೆ ಆಧಾರದಲ್ಲಿ ಕೆಲಸ ಕಲ್ಪಿಸುವುದಾಗಿ ಹೇಳಿ ಈ ಹಣ ಪಡೆದಿದ್ದಾರೆ ಎನ್ನಲಾಗಿದೆ. ಜೊತೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮತ್ತು ಪರಿಷತ್ ಸದಸ್ಯರ ಹೆಸರನ್ನು ಬಳಸಿಕೊಂಡು ನಂಬಿಸಿ ವಂಚಿಸಿರುವುದಾಗಿ ಆರೋಪಿಸಲಾಗಿದೆ. ಈ ಕುರಿತು ಅಸ್ಮಾ ಬಾನು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರು ಆಧರಿಸಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿ ಪಕ್ಷಕ್ಕೆ ಮುಜುಗರ ಉಂಟಾಯಿತು. ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ವೇತಾ ಬಂಡಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು. ಅಂತಿಮವಾಗಿ ಜಿಲ್ಲಾಧ್ಯಕ್ಷ ಆರ್. ಪ್ರಸನ್ನ ಕುಮಾರ್ ಆದೇಶದಂತೆ ಇಬ್ಬರನ್ನು 6 ವರ್ಷಗಳ ಕಾಲ ಪಕ್ಷದಿಂದ ಅಮಾನತು ಮಾಡಲಾಗಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.