2026-06-02 11:43:24

ಬಿಜೆಪಿಗೆ ಗುಡ್‌ ಬೈ ಹೇಳಿದ ಕೆ.ಅಣ್ಣಾಮಲೈ|Speed News Kannada

 ಬಿಜೆಪಿಗೆ ಗುಡ್‌ ಬೈ ಹೇಳಿದ ಕೆ.ಅಣ್ಣಾಮಲೈ|Speed News Kannada

ನವದೆಹಲಿ: ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಇಂದು ಬಿಜೆಪಿಗೆ ಅಧಿಕೃತವಾಗಿ ವಿದಾಯ ಹೇಳಿದ್ದಾರೆ. ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿಎಲ್ ಸಂತೋಷ್  ಅವರನ್ನು ಭೇಟಿ ಮಾಡಿ ತಮ್ಮ ಮುಂದಿನ ರಾಜಕೀಯ ಹೆಜ್ಜೆಗಳ ಕುರಿತು ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಅಣ್ಣಾಮಲೈ ಅವರು ತಾವು ರಾಜಕೀಯವಾಗಿ ಸ್ವತಂತ್ರ ಹಾದಿಯಲ್ಲಿ ಸಾಗಲು ಬಯಸುತ್ತಿರುವುದಾಗಿ ಬಿಜೆಪಿ ನಾಯಕತ್ವಕ್ಕೆ ಸ್ಪಷ್ಟಪಡಿಸಿದ್ದಾರೆ. ತಮ್ಮದೇ ಆದ ರಾಜಕೀಯ ಪಕ್ಷವನ್ನು ಸ್ಥಾಪಿಸುವ ಉದ್ದೇಶ ಹೊಂದಿರುವುದಾಗಿಯೂ ಹೇಳಿಕೊಂಡಿದ್ದಾರೆ.

ಮೂಲಗಳ ಪ್ರಕಾರ, ಬಿಜೆಪಿ ಮುಖಂಡರು ಅಣ್ಣಾಮಲೈ ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳಲು ಪ್ರಯತ್ನಿಸಿದ್ದು, ಅವರಿಗೆ ರಾಜ್ಯಸಭಾ ಸದಸ್ಯತ್ವದ  ಆಹ್ವಾನ ಕೊಟ್ಟಿದ್ದಾರೆ. ಆದರೆ ಅಣ್ಣಾಮಲೈ ಈ ಅವಕಾಶವನ್ನು ನಯವಾಗಿಯೇ ತಿರಸ್ಕರಿಸಿದ್ದಾರೆ ಎಂದು ಹೇಳಲಾಗಿದೆ.

ತಮಿಳುನಾಡಿನ ಯಾವುದೇ ರಾಜಕೀಯ ಪಕ್ಷಕ್ಕೆ ಸೇರುವ ಉದ್ದೇಶವೂ ತಮಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.