2026-03-07 03:36:13

Kanakarajas journey in North Karnataka| ಉತ್ತರ ಕರ್ನಾಟಕದಲ್ಲಿ ಕನಕರಾಜನ ಸಂಚಾರ | Speed News Kannada

Kanakarajas journey in North Karnataka| ಉತ್ತರ ಕರ್ನಾಟಕದಲ್ಲಿ ಕನಕರಾಜನ ಸಂಚಾರ | Speed News Kannada

ಅನೂಪ್ ರೇವಣ್ಣ ನಾಯಕರಾಗಿ ನಟಿಸುತ್ತಿರುವ ಈ ಚಿತ್ರ ಸಿ.ಎಂ ಅಭಿಮಾನಿಯ ಕಥೆ .

ಸುಕೃತಿ ಚಿತ್ರಾಲಯ ಲಾಂಛನದಲ್ಲಿ ಎಸ್ ಆರ್ ಸನತ್ ಕುಮಾರ್ ಅವರು ನಿರ್ಮಿಸುತ್ತಿರುವ, ಡಾ||ವಿ.ನಾಗೇಂದ್ರಪ್ರಸಾದ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಸಂಗೀತ ಸಂಯೋಜನೆಯನ್ನು ಮಾಡುತ್ತಿರುವ ಹಾಗೂ ಆರ್ ರವೀಂದ್ರ ನಿರ್ದೇಶನದ "ಕನಕರಾಜ" ಚಿತ್ರದ ಎರಡನೇ ಹಂತದ ಚಿತ್ರೀಕರಣ ಬೆಳಗಾವಿ, ಗೋಕಾಕ್ ಮುಂತಾದ ಕಡೆ ಬಿರುಸಿನಿಂದ ಸಾಗಿದೆ. ಹದಿನೈದು ದಿನಗಳ ಕಾಲ ಮಾತಿನ ಭಾಗ, ಸಾಹಸ ಸನ್ನಿವೇಶಗಳು ಹಾಗೂ ಹಾಡುಗಳ ಚಿತ್ರೀಕರಣ ನಡೆಯಲಿದೆ‌. ನಾಯಕ ಅನೂಪ್ ರೇವಣ್ಣ, ನಾಯಕಿ ನಿಮಿಷ, ಖಳನಟ ಮಂಜುನಾಥ್ ಅರಸ್ ಮುಂತಾದವರು ಈ ಭಾಗದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಮೊದಲ ಭಾಗದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆದಿದೆ. 

"ಕನಕರಾಜ" ಇದು ಮುಖ್ಯಮಂತ್ರಿಗಳ ಅಭಿಮಾನಿಯ ಕಥೆ. "FAN OF CM" ಎಂಬ ಅಡಿಬರಹ ಕೂಡ ಇದೆ. ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಪ್ರಮೋದ್ ಭಾರತೀಯ ಛಾಯಾಗ್ರಹಣ, ಕೆ‌.ಎಂ.ಪ್ರಕಾಶ್ ಸಂಕಲನ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಹಾಗೂ ಧನಂಜಯ ಅವರ ನೃತ್ಯ ನಿರ್ದೇಶನವಿದೆ‌.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.