2026-06-08 01:24:29

Kannadas living abroad need not be afraid | ವಿದೇಶಗಳಲ್ಲಿರುವ ಕನ್ನಡಗರು ಹೆದರಬೇಕಿಲ್ಲ ಸಿಎಂ ಸಿದ್ದರಾಮಯ್ಯ ಭರವಸೆ | Speed News Kannada

Kannadas living abroad need not be afraid | ವಿದೇಶಗಳಲ್ಲಿರುವ ಕನ್ನಡಗರು ಹೆದರಬೇಕಿಲ್ಲ ಸಿಎಂ ಸಿದ್ದರಾಮಯ್ಯ ಭರವಸೆ | Speed News Kannada

ಬೆಂಗಳೂರು:ವಿದೇಶಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಅವರು ಈ ಮಾಹಿತಿ ನೀಡಿದ್ದಾರೆ.
ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದಿಂದಾಗಿ ಇಸ್ರೇಲ್, ಯುಎಇ, ಇರಾನ್, ಖತಾರ್ ಸೇರಿದಂತೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರ ಸುರಕ್ಷತೆಯನ್ನು ನಾವು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಈ ಸಂಬಂಧ ದೆಹಲಿಯ ನಿವಾಸಿ ಆಯುಕ್ತರ ಜೊತೆ ಸಮಾಲೋಚನೆ ನಡೆಸಿ, ಅವರ ಸುರಕ್ಷತೆಗೆ ಎಲ್ಲಾ ರೀತಿಯ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ. 
ಮಧ್ಯಪ್ರಾಚ್ಯ ದೇಶಗಳಲ್ಲಿ ವಿಮಾನ ಸಂಚಾರ ಸ್ಥಗಿತಗೊಂಡಿರುವ ಕಾರಣ ನಾಡಿಗೆ ಮರಳಲು ಸಾಧ್ಯವಾಗದೆ ಯುದ್ಧಪೀಡಿತ ರಾಷ್ಟ್ರಗಳಲ್ಲಿ ಸಿಲುಕಿರುವವರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮನವಿ ಮಾಡುತ್ತೇನೆ. ಸಹಾಯವಾಣಿಯನ್ನು ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಯುದ್ಧಪೀಡಿತ ದೇಶಗಳಲ್ಲಿ ನೆಲೆಸಿರುವ ಕುಟುಂಬ ಸದಸ್ಯರು ಸಂಪರ್ಕಕ್ಕೆ ಸಿಗದೆ ಇದ್ದಲ್ಲಿ ಯಾರೂ ಕೂಡ ಆತಂಕಕ್ಕೆ ಒಳಗಾಗುವುದು ಬೇಡ. ಪ್ರತಿಯೊಬ್ಬ ಕನ್ನಡಿಗನ ಸುರಕ್ಷತೆ ನಮ್ಮ‌ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಈಗಾಗಲೇ ಕಾರ್ಯಪ್ರವೃತ್ತರಾಗಿದ್ದೇವೆ. 
ಬಳ್ಳಾರಿ ಮೂಲದ 32 ಮಂದಿ ದುಬೈನಲ್ಲಿ ಸಿಲುಕಿರುವ ಬಗ್ಗೆ ಮಾಜಿ ಸಚಿವರಾದ ನಾಗೇಂದ್ರ ಅವರು ನನಗೆ ಮಾಹಿತಿ ನೀಡಿದ್ದು, ಅವರ ಸುರಕ್ಷತೆಯ ಬಗ್ಗೆಯೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ
ರಾಜ್ಯ ಸರ್ಕಾರ ಈಗಾಗಲೇ ಸಹಾಯವಾಣಿ ಆರಂಭಿಸಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.