2026-03-07 05:16:28

Kantara beauty Saptami Gowda outraged | ನಮ್ಮನ್ನು ಅಸಭ್ಯವಾಗಿ ಸೆರೆಹಿಡಿದರೆ ಸಹಿಸಲ್ಲ ಕಾಂತಾರಾ ಚೆಲುವೆ ಸಪ್ತಮಿ ಗೌಡ ಆಕ್ರೋಶ | Speed News Kannada

Kantara beauty Saptami Gowda outraged | ನಮ್ಮನ್ನು ಅಸಭ್ಯವಾಗಿ ಸೆರೆಹಿಡಿದರೆ ಸಹಿಸಲ್ಲ ಕಾಂತಾರಾ ಚೆಲುವೆ ಸಪ್ತಮಿ ಗೌಡ ಆಕ್ರೋಶ | Speed News Kannada

 ಸಿನಿಮಾ ಕಾರ್ಯಕ್ರಮಗಳನ್ನು ವರದಿ ಮಾಡಲು ನೋಡಲು ಆಗಮಿಸುವ ಕೆಲವರು ಕೆಟ್ಟದ್ದಾಗಿ ಮತ್ತು ಅಸಭ್ಯ ರೀತಿಯಲ್ಲಿ ನಟಿಯರ ಫೋಟೋ ಮತ್ತು ವಿಡಿಯೋಗಳನ್ನು ಚಿತ್ರೀಕರಿಸಿ ಅಪ್‌ ಲೋಡ್‌ ಮಾಡುವುದರ ವಿರುದ್ಧ ಕಾಂತಾರಾ ಚೆಲುವೆ ಸಪ್ತಮಿ ಗೌಡ  ಸಿಡಿದೆದ್ದಿದ್ದಾರೆ.
ಈ ಪೋಸ್ಟ್ ಸಾಕಷ್ಟು ವೈರಲ್ ಆಗುತ್ತಿದೆ. ಸಪ್ತಮಿ ಅವರಷ್ಟೇ ಅಲ್ಲದೆ ರಮ್ಯಾ ಮತ್ತು ಯುವ ರಾಜ್ಕುಮಾರ್ ಅವರೂ ಅಸಭ್ಯ ವರ್ತನೆ ವಿರುದ್ಧ ಕಿಡಿ ಕಾರಿದ್ದಾರೆ.
ಇಂತಹ ವರ್ತನೆಯಿಂದಾಗಿ ನಟಿಯರ ಗೌರವಕ್ಕೆ ಧಕ್ಕೆ ಉಂಟಾಗುತ್ತಿದೆ ಎಂದು ಆಕ್ರೋಶ ಹೊರಹಾಕಿರುವ ಸಪ್ತಮಿ ಗೌಡ ಅವರು, ಸಾಂಾಜಿಕ ಜಾಲತಾಣದಲ್ಲಿ ಪೋಸ್ಟ್‌ ವೊಂದನ್ನು ಹಂಚಿಕೊಂಡಿದ್ದಾರೆ. 
ಅದರ ಸಂಪೂರ್ಣ ವಿವರ ಹೀಗಿದೆ:
“ಚಿತ್ರರಂಗದಲ್ಲಿರುವ ಮಹಿಳೆಯರಾಗಿ ನಿರಂತರವಾಗಿ ನಡೆಯುತ್ತಿರುವ ಒಂದು ಗಂಭೀರ ಸಮಸ್ಯೆಯನ್ನು ಎದುರಿಸಲು ಒಟ್ಟಾಗಿ ನಿಂತಿದ್ದೇವೆ. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮಹಿಳಾ ಕಲಾವಿದರ ವಿಡಿಯೋಗಳು ಮತ್ತು ಫೋಟೋಗಳನ್ನು ಅಸಭ್ಯ ಕೋನಗಳಿಂದ ಚಿತ್ರಿಕರಿಸಿ, ನಮ್ಮ ಕಲೆಗಿಂತ ನಮ್ಮ ದೇಹದ ಮೇಲೆ ಅನಾವಶ್ಯಕವಾಗಿ ಜೂಮ್ ಮಾಡಿ ಪ್ರಸಾರ ಮಾಡುವ ಘಟನೆಗಳು ಪುನಃ ಪುನಃ ನಡೆಯುತ್ತಿವೆ. ಇಂತಹ ವರ್ತನೆ ಕೆಲವರಿಂದ ನಡೆಯುತ್ತಿರುವುದಾದರೂ ಅದು ಅಸಭ್ಯ, ಅವಮಾನಕಾರಿ ಮತ್ತು ಸಂಪೂರ್ಣವಾಗಿ ಅಸ್ವೀಕಾರಾರ್ಹವಾಗಿದೆ. ನಾವು ಇಲ್ಲಿ ನಮ್ಮ ಕಲೆಗಾಗಿ ಬಂದಿದ್ದೇವೆ ನಾವು ಇಲ್ಲಿ ನಮ್ಮ ಸಿನಿಮಾ ಸಿನಿಮಾಕ್ಕಾಗಿ ಬಂದಿದ್ದೇವೆ. ಉದ್ದೇಶಪೂರ್ವಕವಾಗಿ ಜೂಮ್ ಮಾಡುವುದು ಮತ್ತು ಅಸಭ್ಯ ಕೋನಗಳಿಂದ ಚಿತ್ರೀಕರಿಸುವುದು, ನಮ್ಮ ಗೌರವಕ್ಕೆ ಸ್ಪಷ್ಟ ಧಕ್ಕೆ. ಇದನ್ನು ಸಾಮಾನ್ಯವೆಂದು ಸ್ವೀಕರಿಸುವುದಿಲ್ಲ, ಸಹಿಸುವುದಿಲ್ಲ. ಕಾರ್ಯಕ್ರಮಗಳನ್ನು ವರದಿ ಮಾಡುವವರು ವೃತ್ತಿಪರತೆ ಮೂಲಭೂತ ಗೌರವ ಮತ್ತು ಶಿಸ್ತನ್ನು ಕಾಪಾಡಬೇಕು ಎಂದು ನಾವು ನಿರೀಕ್ಷಿಸುತ್ತೇವೆ . ಈ ಗಡಿರೇಖೆಯನ್ನು ಸ್ಪಷ್ಟವಾಗಿ ಎಳೆದು, ನಾವು ಒಟ್ಟಾಗಿ ನಿಂತಿದ್ದೇವೆ. ಇಂತಹ ಅನುಭವವನ್ನು ಎದುರಿಸಿದ ಪ್ರತಿಯೊಬ್ಬ ಮಹಿಳೆಯೊಂದಿಗೂ ನಾವು ಐಕ್ಯತೆಯಲ್ಲಿ ನಿಂತಿದ್ದೇವೆ. ಗೌರವವನ್ನು ಬೇಡುವ ನಮ್ಮ ಧ್ವನಿ ಮುಂದುವರಿಯುತ್ತದೆ” ಎಂದು ಸಪ್ತಮಿ ಗೌಡ ಪೋಸ್ಟ್ ಮಾಡಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.