2026-07-23 11:16:58

KD Movie The midnight show was a huge success | ಮಧ್ಯರಾತ್ರಿ ಶೋನಲ್ಲೂ ಜನವೋ ಜನ ಕೆ ಡಿ ಗೆ ಭರ್ಜರಿ ರೆಸ್ಪಾನ್ಸ್ | Speed News Kannada

KD Movie The midnight show was a huge success | ಮಧ್ಯರಾತ್ರಿ ಶೋನಲ್ಲೂ ಜನವೋ ಜನ ಕೆ ಡಿ ಗೆ ಭರ್ಜರಿ ರೆಸ್ಪಾನ್ಸ್ | Speed News Kannada

ಬೆಂಗಳೂರು: ಸ್ಯಾಂಡಲ್‌ವುಡ್‌ನ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹಾಗೂ ನಿರ್ದೇಶಕ ಜೋಗಿ ಪ್ರೇಮ್ ಕಾಂಬಿನೇಷನ್‌ನ ಬಹುನಿರೀಕ್ಷಿತ ಚಿತ್ರ 'ಕೆಡಿ ದಿ ಡೆವಿಲ್' ಸಿನಿಮಾ ಅದ್ದೂರಿಯಾಗಿ ತೆರೆಕಂಡಿದೆ. ಮೊದಲ ದಿನವೇ ಪ್ರೇಕ್ಷಕರಿಂದ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬಾಕ್ಸ್ ಆಫೀಸ್‌ನಲ್ಲಿ ಸಿನಿಮಾ ಹೊಸ ಸಂಚಲನ ಸೃಷ್ಟಿಸಿದೆ. ರಾಜ್ಯಾದ್ಯಂತ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಸಿನಿಮಾ ನೋಡಿ ಪ್ರೇಕ್ಷಕ ಫುಲ್ ಮಾರ್ಕ್ಸ್ ನೀಡಿದ್ದಾನೆ.
ಆರಂಭಿಕ ಅಂಕಿ-ಅಂಶಗಳ ಪ್ರಕಾರ, 'ಕೆಡಿ' ಸಿನಿಮಾ ಮೊದಲ ದಿನ ಭಾರತದಾದ್ಯಂತ ಅಂದಾಜು ₹4.10 ಕೋಟಿ ಗಳಿಕೆ ಮಾಡುವ ಮೂಲಕ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಕರ್ನಾಟಕದಲ್ಲಿ ಮಾತ್ರವಲ್ಲದೆ ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲೂ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಸುಮಾರು 845ಕ್ಕೂ ಹೆಚ್ಚು ಪ್ರದರ್ಶನಗಳು ಮೊದಲ ದಿನ ನಡೆದಿದ್ದು, ಸಂಜೆ ಮತ್ತು ರಾತ್ರಿಯ ಶೋಗಳಲ್ಲಿ ಶೇ. 45ಕ್ಕೂ ಹೆಚ್ಚು ಆಕ್ಯುಪೆನ್ಸಿ ದಾಖಲಾಗಿದೆ. ಈ ಮೂಲಕ 2026ರಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಕನ್ನಡ ಚಿತ್ರಗಳ ಸಾಲಿಗೆ 'ಕೆಡಿ' ಸೇರ್ಪಡೆಯಾಗಿದೆ.
1970ರ ದಶಕದ ಬೆಂಗಳೂರಿನ ಅಂಡರ್‌ವರ್ಲ್ಡ್ ಕಥಾಹಂದರ ಹೊಂದಿರುವ ಈ ಸಿನಿಮಾದಲ್ಲಿ ಧ್ರುವ ಸರ್ಜಾ ಅವರ 'ಕಾಳಿ' ಪಾತ್ರಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಬಾಲಿವುಡ್ ಸ್ಟಾರ್ ಸಂಜಯ್ ದತ್, ಶಿಲ್ಪಾ ಶೆಟ್ಟಿ ಮತ್ತು ಕ್ರೇಜಿ ಸ್ಟಾರ್ ರವಿಚಂದ್ರನ್ ಅವರ ಅಬ್ಬರದ ನಟನೆ ಚಿತ್ರದ ತೂಕ ಹೆಚ್ಚಿಸಿದೆ. ವಾರಾಂತ್ಯದ ದಿನಗಳಾದ ಶನಿವಾರ ಮತ್ತು ಭಾನುವಾರ ಚಿತ್ರದ ಕಲೆಕ್ಷನ್ ಮತ್ತಷ್ಟು ಏರಿಕೆಯಾಗುವ ಲಕ್ಷಣಗಳಿದ್ದು, ಮೊದಲ ವಾರದಲ್ಲೇ ದೊಡ್ಡ ಮೊತ್ತದ ಹಣ ಗಳಿಸುವ ಮುನ್ಸೂಚನೆ ಸಿಕ್ಕಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.