2026-06-08 03:55:11

Kempegowda Airport | ಕೆಂಪೇಗೌಡ ಏರ್ಪೋರ್ಟ್ ನಲ್ಲಿ 2.97 ಕೋಟಿ ರೂ ಮೌಲ್ಯದ ಹೈಡೋಪೋನಿಕ್ ಗಾಂಜಾ ವಶಕ್ಕೆ ಮೂವರು ಅರೆಸ್ಟ್ | Speed News Kannada

Kempegowda Airport | ಕೆಂಪೇಗೌಡ ಏರ್ಪೋರ್ಟ್ ನಲ್ಲಿ 2.97 ಕೋಟಿ ರೂ ಮೌಲ್ಯದ ಹೈಡೋಪೋನಿಕ್ ಗಾಂಜಾ ವಶಕ್ಕೆ ಮೂವರು ಅರೆಸ್ಟ್ | Speed News Kannada

ಬೆಂಗಳೂರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ವಿದೇಶದಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 2.97 ಕೋಟಿ ರೂಪಾಯಿ ಮೌಲ್ಯದ ಹೈಡೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.ಈ ಸಂಬಂಧ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಆರೋಪಿಗಳನ್ನು ಅಧಿಕಾರಿಗಳು ಬಂಧಿಸಿದ್ದಾರೆ.
ಥಾಯ್ಲೆಂಡ್‌ನ ಪುಕೆಟ್ ಹಾಗೂ ಮಲೇಶಿಯಾದಿಂದ ಕೆಐಎಬಿಗೆ ಆಗಮಿಸಿದ್ದ ಮೂವರು ಪ್ರಯಾಣಿಕರ ಲಗೇಜ್ ಬ್ಯಾಗ್‌ಗಳನ್ನು ಇಮಿಗ್ರೇಷನ್ ವಿಭಾಗದಲ್ಲಿ ಪರಿಶೀಲಿಸಿದಾಗ, ಪ್ಯಾಕೆಟ್‌ಗಳಾಗಿ ಅಡಗಿಸಿಟ್ಟಿದ್ದ ಒಟ್ಟು 8.5 ಕೆ.ಜಿ ಹೈಡೋಪೋನಿಕ್ ಗಾಂಜಾ ಪತ್ತೆಯಾಗಿದೆ.
ಇನ್ನು, ಪ್ರತ್ಯೇಕ ಪ್ರಕರಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾರೀ ಪ್ರಮಾಣದ ಮಾದಕವಸ್ತು ಜಾಲ ಬಯಲಾಗಿದ್ದು, ₹53,03,000 ಮೌಲ್ಯದ 1 ಕ್ವಿಂಟಾಲ್ 6 ಕೆ.ಜಿ 50 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಗಾಂಜಾ ಪೂರೈಕೆ ಮಾಡುತ್ತಿದ್ದ ಒಡಿಶಾದ ವ್ಯಕ್ತಿಯೊಂದಿಗೆ ಮೂವರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.