2026-07-23 08:25:39

kerala; three candidates of bjp enter assembly including rajeev chandrashekar ಕೇರಳ: ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಸೇರಿ ಮೂವರು ಬಿಜೆಪಿಯಿಂದ ಆಯ್ಕೆ| Speed News Kannada

kerala; three candidates of bjp enter assembly including rajeev chandrashekar ಕೇರಳ: ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಸೇರಿ ಮೂವರು ಬಿಜೆಪಿಯಿಂದ ಆಯ್ಕೆ| Speed News Kannada

ತಿರುವನಂತಪುರಂ: ಹತ್ತು ವರ್ಷಗಳ ನಂತರ ಕೇರಳಂ ರಾಜ್ಯದ ಮೂರು ಕ್ಷೇತ್ರಗಳಲ್ಲಿ ಮೊದಲ ಬಾರಿಗೆ ಕಮಲ ಅರಳಿದೆ. ನೇಮಮ್ ಕ್ಷೇತ್ರದಲ್ಲಿ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್, ಚಾಥನೂರ್‌ ‌ ಕ್ಷೇತ್ರದಲ್ಲಿ ಬಿ.ಬಿ. ಗೋಪಕುಮಾರ್ ಮತ್ತು ಕಳಕೂಟ್ಟಂ ಕ್ಷೇತ್ರದಲ್ಲಿ ಬಿ.ಬಿ. ಗೋಪಕುಮಾರ್ ಗೆಲುವಿನ ನಗೆ ಬೀರಿದ್ದಾರೆ.

ನೇಮಮ್ ಕ್ಷೇತ್ರದಲ್ಲಿ ರಾಜೀವ್ ಚಂದ್ರಶೇಖರ್ ತಮ್ಮ ನಿಕಟ ಸ್ಪರ್ಧಿ ವಿ.ಶಿವನ್‌ಕುಟ್ಟಿ ವಿರುದ್ಧ 3,500ಕ್ಕೂ ಅಧಿಕ ಮತಗಳ ಗೆಲುವು ಸಾಧಿಸಿದ್ದಾರೆ.

ಕಳಕೂಟ್ಟಂ ಕ್ಷೇತ್ರದಲ್ಲಿ ನಿಕಟ ಸ್ಪರ್ಧೆ ಏರ್ಪಟ್ಟಿತ್ತು. ಕೊನೆಯ ಸುತ್ತಿನ ವರೆಗೂ ಸಾಗಿದ ಜಿದ್ದಾಜಿದ್ದಿನ ಸ್ಪರ್ಧೆಯಲ್ಲಿ ಕಡಕಂಪಳ್ಳಿ ಸುರೇಂದ್ರನ್ ವಿರುದ್ಧ ಮುರಳೀಧರನ್ ಅಲ್ಪ ಮತ ಅಂದರೆ 428 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದಾರೆ.

ಚಾಥನೂರ್‌ ‌ ಕ್ಷೇತ್ರದಲ್ಲಿ ಬಿ.ಬಿ. ಗೋಪಕುಮಾರ್ ಅವರು ಗೆದ್ದಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.